ಅಬುಧಾಬಿ: ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ತಲುಪುವ ರೋಗಿಗಳಿಗೆ ವಿಮೆ ಪರಿಗಣಿಸದೆ ಚಿಕಿತ್ಸೆ ನೀಡಬೇಕು ಎಂದು ಅಬುಧಾಬಿ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ರೋಗಿಗಳಿಗೆ ಚಿಕಿತ್ಸೆಯನ್ನು ನಿರಾಕರಿಸಬಾರದು ಅಥವಾ ಹಣದ ಹೆಸರಿನಲ್ಲಿ ವಿಳಂಬ ಮಾಡಬಾರದು ಎಂದು ನಿರ್ದೇಶನದಲ್ಲಿ ತಿಳಿಸಲಾಗಿದೆ.
ಅಬುಧಾಬಿ ಸರ್ಕಾರ ಹೊರಡಿಸಿದ ಈ ನಿರ್ದೇಶನವನ್ನು ಇಡೀ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಲ್ಲಿ ತಕ್ಷಣ ಹಣವನ್ನು ಕೇಳಬಾರದು ಅಥವಾ ವಿಮೆಯ ಹೆಸರಿನಲ್ಲಿ ಚಿಕಿತ್ಸೆ ವಿಳಂಬಗೊಳಿಸಬಾರದು. ಅಬುಧಾಬಿಯ ಸಂಪೂರ್ಣ ಆರೋಗ್ಯ ಕೇಂದ್ರಗಳು ವಿಮಾ ರಕ್ಷಣೆಯನ್ನು ಲೆಕ್ಕಿಸದೆ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ದಾಖಲಿಸುವ ಜವಾಬ್ದಾರಿಯನ್ನು ಹೊಂದಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಅಲ್ ಐನ್ನ ಎರಡು ಆಸ್ಪತ್ರೆಗಳು ವಿಮೆ ಅವಧಿ ಮುಗಿದ ನೆಪದಲ್ಲಿ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸಿದ ಕಾರಣ ಸಾವನ್ನಪ್ಪಿದ ಎಂಟು ವರ್ಷದ ಮಗನ ತಂದೆ ನೀಡಿದ ದೂರಿನ ತನಿಖೆಯ ಮಧ್ಯೆ ಸರ್ಕಾರದ ಪ್ರಸ್ತಾಪ ಬಂದಿದೆ. ಆದರೆ, ಈ ಪ್ರಸ್ತಾಪವು ಅಬುಧಾಬಿಯಲ್ಲಿ ಹಲವು ವರ್ಷಗಳಿಂದ ಜಾರಿ ಇದ್ದರೂ, ಇದೀಗ ಸರಕಾರ ಅದನ್ನು ಬಿಗಿಗೊಳಿಸುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ