ವಿಶ್ವದಲ್ಲಿರುವ ಯಾವುದೇ ದೇಶಕ್ಕೆ ಇಲ್ಲದ ಇತಿಹಾಸ ನಮ್ಮ ಭಾರತ ದೇಶಕ್ಕಿದೆ. 1947 ರಲ್ಲಿ ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ದೇಶದಲ್ಲಿ ಇಂದಿನವರೆಗೆ ಸರ್ವ ಧರ್ಮದವರು ಅನ್ಯೋನ್ಯತೆಯಿಂದ ಬಾಳುತ್ತಿದ್ದಾರೆ. ಭಾರತ ದೇಶದಲ್ಲಿ ಎಲ್ಲರೂ ಸರಿಸಮಾನರು, ಇಲ್ಲಿ ಜಾತಿ, ಮತ ಭೇದಭಾವ ವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಡಾ. ಬಿ ಆರ್ ಅಂಬೇಡ್ಕರ್ ರವರ ನೇತೃತ್ವದಲ್ಲಿ ರಚನೆಗೊಂಡ ಸಂವಿಧಾನದಲ್ಲಿ ವಿವರಿಸಲಾಗಿದೆ.
.ಇದರಂತೆ ಇಲ್ಲಿಯ ಅಧಿಕಾರಿಗಳು ಆಡಳಿತ ನಡೆಸಿ ದೇಶದ ಶಾಂತಿಗೆ ಯಾವುದೇ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕಾಗಿದೆ.
ನಮ್ಮ ದೇಶ ಆರ್ಥಿಕವಾಗಿ ಹಿಂದೆಂದೂ ಕಾಣದಷ್ಟು ಕೆಳಮಟ್ಟಕ್ಕೆ ಸಾಗುತ್ತಿದೆ. ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಅಧಿಕವಾಗುತ್ತಿದೆ. ರೈತರ ಕೂಗು ಕೇಳುವವರಿಲ್ಲ. ಹೀಗಿರುವಾಗ ಇದನ್ನೆಲ್ಲಾ ಮರೆಮಾಚಲು ಹಾಗೂ ಕೆಲವು ಧರ್ಮದವರನ್ನು ಮಾತ್ರ ಗುರಿಯಾಗಿಸಿ, ಸಂವಿಧಾನಕ್ಕೆ ಯಾವುದೇ ಬೆಲೆ ನೀಡದೆ ತಮಗೆ ತೋಚಿದಂತೆ ನಿಯಮಗಳನ್ನು ಇಂದಿನ ಕೇಂದ್ರ ಸರಕಾರ ರಚಿಸುತ್ತಿದೆ.
ಭಾರತದಲ್ಲಿ ಹುಟ್ಟಿ ಬೆಳೆದು, ಈ ದೇಶ ನಮ್ಮ ಉಸಿರು ಎಂದು ಮನದಾಳದಲ್ಲಿ ದೇಶವನ್ನು ಪ್ರೀತಿಸುವ ಹಲವಾರು ದೇಶ ಪ್ರೇಮಿಗಳಿಗೆ ಇಂದು ತಮ್ಮ ಪೌರತ್ವವನ್ನು ಸಾಬೀತು ಪಡಿಸಬೇಕಾದ ದೌರ್ಭಾಗ್ಯ ಬಂದಿದೆ.
ಭಾರತ ದೇಶವು ಯಾವುದೇ ಧರ್ಮ ಅಥವಾ ರಾಜಕೀಯ ಪಕ್ಷದವರಿಗೆ ಮಾತ್ರವಲ್ಲ, ಭಾರತವು ಎಲ್ಲಾ ಭಾರತೀಯರ ಹಕ್ಕು ಎಂಬುದನ್ನು ಸಂವಿದಾನದಲ್ಲಿ ಸ್ಪಷ್ಟವಾಗಿ ವಿವರಿಸಿದೆ.
ಹೀಗಿರುವಾಗ ಅದರ ಬದಲಾವಣೆಯನ್ನು ಒಪ್ಪಲು ಸಾಧ್ಯವಿಲ್ಲ. ಇದರ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು. ಹೋರಾಟದ ಮೂಲಕ ನಮ್ಮ ಹಕ್ಕನ್ನು ನಾವು ಪಡೆಯಬೇಕು.
ಈಗ ನಡೆಯುತ್ತಿರುವ NRC & CAB ವಿರುದ್ಧ ನ್ಯಾಯಾಂಗವು ಸ್ವಯಂ ಪ್ರೇರಿತವಾಗಿ ಮಧ್ಯ ಪ್ರವೇಶಿಸಿ ಭಾರತದ ಸಂವಿಧಾನವನ್ನು ಉಳಿಸಬೇಕು ಎಂದು ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತದೆ.















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ