ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ವಿದ್ಯಾರ್ಥಿಗಳನ್ನು ಬಂಧಿಸಿದ ಘಟನೆಗೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಾಮಿಯಾ ವಿಶ್ವವಿದ್ಯಾಲಯದ ಉಪ ಕುಲಪತಿ ನಜ್ಮಾ ಅಖ್ತರ್
“ಇಲ್ಲಿ ಭಾವನಾತ್ಮಕವಾಗಿ ನಷ್ಟವುಂಟಾಗಿದೆ, ವಿಶ್ವವಿದ್ಯಾಲಯದ ಆಸ್ತಿಪಾಸ್ತಿಗೆ ಹಾನಿಯಾಗಿದೆ, ಈ ಹಾನಿಯನ್ನು ತುಂಬಿಕೊಡುವುದು ಹೇಗೆ” ಎಂದು ಪ್ರಶ್ನಿಸಿದ್ದಾರೆ.
ವಿಶ್ವವಿದ್ಯಾಲಯ ಕ್ಯಾಂಪಸ್ ಒಳಗೆ ಪೊಲೀಸರು ಪ್ರವೇಶಿಸಿದ್ದಕ್ಕೆ ವಿರುದ್ಧವಾಗಿ ಎಫ್ಐಆರ್ ದಾಖಲಿಸುತ್ತೇವೆ. ಆಸ್ತಿಪಾಸ್ತಿಗಳನ್ನು ಮರು ನಿರ್ಮಾಣ ಮಾಡಬಹುದು, ಆದರೆ ವಿದ್ಯಾರ್ಥಿಗಳು ಅನುಭವಿಸಿದ ನೋವಿಗೆ ಪರಿಹಾರವೇನು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದರು.
ಕ್ಯಾಂಪಸ್ ನೊಳಗೆ ಅನುಮತಿಯಿಲ್ಲದೆ ಪೊಲೀಸರು ಪ್ರವೇಶಿಸುವ ಹಾಗಿಲ್ಲ. ಅವರು ನಮ್ಮ ವಿದ್ಯಾರ್ಥಿಗಳನ್ನು ಬೆದರಿಸಿ, ಹೆದರಿಸಿದ್ದಾರೆ. ವಿಶ್ವವಿದ್ಯಾಲಯದ ಆಸ್ತಿಪಾಸ್ತಿಗಳಿಗೂ ಹಾನಿಯಾಗಿದೆ ಎಂದರು.
ಘಟನೆಯಲ್ಲಿ ಸುಮಾರು 200 ವಿದ್ಯಾರ್ಥಿಗಳಿಗೆ ಗಾಯವಾಗಿದೆ ಅವರಲ್ಲಿ ಹಲವರು ಜಾಮಿಯಾ ವಿಶ್ವವಿದ್ಯಾಲಯದವರು. ಈ ಸಂಪೂರ್ಣ ಘಟನೆ ಬಗ್ಗೆ ಪೊಲೀಸರ ವಿರುದ್ಧ ನಾವು ಎಫ್ಐಆರ್ ದಾಖಲಿಸುತ್ತೇವೆ, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುತ್ತೇವೆ ಮತ್ತು ಮಾನವ ಸಂಪನ್ಮೂಲ ಇಲಾಖೆಗೆ ವರದಿ ಸಲ್ಲಿಸುತ್ತೇವೆ ಎಂದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ