ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಸಹಜವಾಗಿಯೇ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ದೆಹಲಿಯ ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳ ಮೇಲೆ ಪೋಲಿಸರು ದೌರ್ಜನ್ಯ ನಡೆಸಿರುವುದು ದೇಶದ ಕಾನೂನು ವ್ಯವಸ್ಥೆ ಹದಗೆಟ್ಟಿರುವುದರ ಸೂಚನೆ ಎಂದು ಎಸ್ಸೆಸ್ಸೆಫ್ ಕ್ಯಾಂಪಸ್ ವಿಭಾಗವು ಅಭಿಪ್ರಾಯಪಟ್ಟಿದೆ.
ವಿವಿ ಯ ಆವರಣದೊಳಗೆ ಸಂಬಂಧಪಟ್ಟವರ ಅನುಮತಿ ಇಲ್ಲದೇ ಪೋಲಿಸರು ಒಳಪ್ರವೇಶಿಸಿದ್ದೇ ವಿವಿಯ ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ.
ಇಂತಹ ಅನಪೇಕ್ಷಿತ ಘಟನೆಗಳು ವಿದ್ಯಾರ್ಥಿ ಯುವಜನತೆಯಲ್ಲಿ ಕಾನೂನಿನ ಮೇಲೆ ಭ್ರಮನಿರಸನ ಉಂಟು ಮಾಡುವ ಅಪಾಯವಿದೆ. ದೌರ್ಜನ್ಯವೆಸಗಿರುವ ಪೋಲಿಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರಕಟನೆಯಲ್ಲಿ ಆಗ್ರಹಿಸಿರುವ ಎಸ್ಸೆಸ್ಸೆಫ್ ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಶರೀಫ್ ಬೆಂಗಳೂರು ಹಾಗೂ ರಾಜ್ಯ ವಿಸ್ಡಂ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮೊಂಟೆಪದವು; ಇದರ ವಿರುದ್ಧ ಕ್ಯಾಂಪಸ್ ಘಟಕಗಳು ಶಾಂತಿಯುತ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ