ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಈ ವರ್ಷದಿಂದ ದ್ವಿತೀಯ ಭಾಷೆ ಇಂಗ್ಲೀಷ್ ಪರೀಕ್ಷೆಗೆ ನಿಗದಿತ ಸಮಯಕ್ಕಿಂತ 30 ನಿಮಿಷ ಹೆಚ್ಚುವರಿ ಸಮಯಾವಕಾಶ ನೀಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಂವೇದನಾ ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಂಗ್ಲಿಂಷ್ ಪರೀಕ್ಷೆಗೆ ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ಹೆಚ್ಚುವರಿ ಸಮಯ ನೀಡಲು ಶಿಕ್ಷಣ ಇಲಾಖೆ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
10ನೇ ತರಗತಿ ಇಂಗ್ಲೀಷ್ ಪರೀಕ್ಷೆ ಬರೆಯಲು ಕಾಲಾವಕಾಶ ಕಡಿಮೆ ಇದ್ದು ಹೆಚ್ಚುವರಿ ಸಮಯ ನೀಡಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹುಬ್ಬಳ್ಳಿಯ ಸುರೇಶ್ ಎಂಬ ವಿದ್ಯಾರ್ಥಿ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಇಂಗ್ಲೀಷ್ ಪರೀಕ್ಷೆಗೆ ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ಹೆಚ್ಚುವರಿ ಸಮಯ ನೀಡಲು ಶಿಕ್ಷಣ ಇಲಾಖೆ ಈಗಾಗಲೇ ಕ್ರಮ ಕೈಗೊಂಡಿರುವುದಾಗಿ ಮಾಹಿತಿ ನೀಡಿದರು.
ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದ್ದು, 2020ರ ಮಾರ್ಚ್ 27 ರಿಂದ ಎಪ್ರಿಲ್ 9ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ