ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾದಾಗಿನಿಂದಲೂ ದೇಶದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರೋಧವಿದ್ದರೂ ಪೌರತ್ವ ಕಾಯ್ದೆ ಜಾರಿಗೆ ತಂದೆ ತರ್ತೀವಿ ಎಂದು ಸವಾಲು ಹಾಕಿದ್ದಾರೆ.
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರು ಭಾರತೀಯ ರಾಷ್ಟ್ರೀಯತೆಯನ್ನು ಪಡೆದುಕೊಳ್ಳುವುದು ಮತ್ತು ಗೌರವದಿಂದ ದೇಶದಲ್ಲಿ ವಾಸಿಸುವುದನ್ನು ಮೋದಿ ಸರ್ಕಾರ ಖಚಿತಪಡಿಸುತ್ತದೆ ಎಂದು ಪ್ರತಿಪಾದಿಸಿದರು.
ಈ ಹೊಸ ಕಾನೂನಿನ ವಿರುದ್ಧವಾಗಿರುವವರು ಈ ಕಾಯ್ದೆಯನ್ನು ತಮ್ಮಿಂದ ಸಾಧ್ಯವಾದಷ್ಟು ವಿರೋಧಿಸುವಂತೆ ಸವಾಲು ಹಾಕಿದರು. ಏನೇ ಬರಲಿ, ಈ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತೀಯ ಪೌರತ್ವ ಸಿಗುತ್ತದೆ ಮತ್ತು ಅವರು ಗೌರವದಿಂದ ಭಾರತದಲ್ಲಿ ಬದುಕುವುದು ಖಚಿತ. ಈ ವಿಚಾರದಲ್ಲಿ ಮೋದಿ ಸರ್ಕಾರದ ದೃಢವಾಗಿದೆ ಎಂದರು.
2019 ಪೌರತ್ವ (ತಿದ್ದುಪಡಿ) ಕಾಯ್ದೆ(ಸಿಎಎ)ಯಿಂದಾಗಿ ಯಾವುದೇ ಭಾರತೀಯನು ತನ್ನ ರಾಷ್ಟ್ರೀಯತೆಯನ್ನು ಕಳೆದುಕೊಳ್ಳುವುದಿಲ್ಲ. ಇನ್ನು ಮೂರು ನೆರೆಯ ರಾಷ್ಟ್ರಗಳ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ಶಾಸನವನ್ನು ಜಾರಿಗೆ ತರಲಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ