ಬೆಂಗಳೂರು: ‘ಇದೊಂದು ಪುಕ್ಕಲು ರಾಜ್ಯ ಸರ್ಕಾರ. ಜನಶಕ್ತಿಗೆ ಹೆದರಿ ನಿಷೇಧಾಜ್ಞೆ ಜಾರಿ ಮಾಡಿದೆ’ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿರುವ ಕಾರಣ ರಾಜ್ಯದ ಹಲೆವೆಡೆ ನಿಷೇಧಾಜ್ಞೆ ಜಾರಿ ಮಾಡಿದ್ದು, ಇದನ್ನು ವಿರೋಧಿಸಿ ಅವರು ಟ್ವೀಟ್ ಮಾಡಿದ್ದಾರೆ.
‘ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭುಗಿಲೆದ್ದಿರುವ ಪ್ರತಿರೋಧವನ್ನು ದಮನಿಸಲು ನಿಷೇಧಾಜ್ಞೆ ಅಸ್ತ್ರವನ್ನು ಬಳಸುತ್ತಿದ್ದಾರೆ. ದಮನಿಸಿದಷ್ಟು ಜನಾಕ್ರೋಶ ಪುಟಿದೆದ್ದು ಬರುತ್ತದೆ ಎನ್ನುವುದನ್ನು ಯಡಿಯೂರಪ್ಪ ಅವರು ತಿಳಿಯಲಿ’ ಎಂದು ಟ್ವೀಟ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಸಂವಿಧಾನದ ಮೌಲ್ಯಗಳ ಕಗ್ಗೊಲೆ ಆಗುತ್ತಿದೆ. ಸೆಕ್ಷನ್ 144 ಜಾರಿ ಮಾಡುವ ಮೂಲಕ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ. ಇದನ್ನು ನಾನು ಎಂದೂ ನಿರೀಕ್ಷಿಸಿರಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
‘ಯಡಿಯೂರಪ್ಪನವರು ಪ್ರಧಾನಿ ನರೇಂದ್ರ ಮೋದಿ ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ನಿಮಗಿಂತ ಅವರೇ ಎಷ್ಟೋ ಉತ್ತಮ. ನಾಚಿಕೆಯಾಗಬೇಕು ನಿಮಗೆ’ ಎಂದು ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ