ಬೆಂಗಳೂರು,ಡಿ.19:ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಗುರಿಯಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆಯುವ ಪ್ರತಿಭಟನೆಯನ್ನು ತಡೆಯುವ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ನಿನ್ನೆಯಿಂದಲೇ 144 ಸೆಕ್ಷನ್ ಜಾರಿಗೊಳಿಸಿತ್ತು. ಅದರಂತೆ ಇಂದು ಬೆಳಿಗ್ಗೆ ಪೊಲೀಸರು ಸಿಕ್ಕಸಿಕ್ಕವರನ್ನು ಬಂಧಿಸಿದ್ದರು. ಆ ಮೂಲಕ ತಾವು ಗೆದ್ದವೆಂದು ಪೊಲೀಸರು ಭಾವಿಸಿದ್ದರು. ಆದರೆ,ಪರಿಸ್ಥಿತಿ ಉಲ್ಟಾ ಆಗಿದ್ದು ಟೌನ್ಹಾಲ್ ಮುಂದೆ ಜನಸಾಗರವೇ ಹರಿದುಬಂದಿದ್ದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿದಷ್ಟೂ ತೀವ್ರ ರೂಪ ಪಡೆದುಕೊಳ್ಳುತ್ತಿದೆ. ಮೂರು ಸಾವಿರಕ್ಕೂ ಹೆಚ್ಚು ಜನ ಟೌನ್ ಹಾಲ್ ಮುಂದೆ ಜಮಾಯಿಸಿ ಪ್ರತಿಭಟಿಸುತ್ತಿದ್ದಾರೆ. ಬೆಂಗಳೂರು ಮಾತ್ರವಲ್ಲದೇ, ಕಲಬುರಗಿ, ಮೈಸೂರು, ಹಾಸನ, ಬಳ್ಳಾರಿ, ಚಿಕ್ಕಮಗಳೂರು ಮುಂತಾದ ಕಡೆ ತೀವ್ರ ಪ್ರತಿಭಟನೆಗಳು ದಾಖಲಾಗಿವೆ.
ಇನ್ನು ಜನಸಾಗರ ಟೌನ್ಹಾಲ್ ಕಡೆ ಹರಿದುಬರುತ್ತಿದ್ದು ಪೊಲೀಸರು ಲಾಠಿ ಚಾರ್ಜ್ ಮಾಡುವ ಸಂಭವವಿದೆ. ಪ್ರತಿಭಟನಾಕಾರರು ಮಾತ್ರ ಶಾಂತಿ ಕಾಯ್ದುಕೊಂಡು ಘೋಷಣೆಗಳ ಮೂಲಕ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ