ಮಂಗಳೂರು, ಡಿ.19:ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರತಿಭಟನೆ ಸಂದರ್ಭ ಬಂದರ್ ಸಮೀಪ ಪೊಲೀಸರ ಗುಂಡಿಗೆ ಖಂದಕ್ ನಿವಾಸಿ ಜಲೀಲ್-(43) ಹಾಗೂ ನೌಶೀನ್ ಕುದ್ರೋಳಿ-(23) ಇಬ್ಬರು ಬಲಿಯಾಗಿದ್ದಾರೆ
ಒಬ್ಬರ ಕಣ್ಣಿಗೆ ಗುಂಡೇಟು ಬಿದ್ದಿದ್ದರೆ, ಮತ್ತೊಬ್ಬರ ಬೆನ್ನಿಗೆ ಗುಂಡು ಬಿದ್ದಿದೆ ಎಂದು ತಿಳಿದುಬಂದಿದೆ. ಇಬ್ಬರನ್ನೂ ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಇಬ್ಬರೂ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮೃತಪಟ್ಟ ಒಬ್ಬರು ಬಂದರ್ ನಿವಾಸಿ, ಮತ್ತೊಬ್ಬರು ಕಂದಕ್ ನಿವಾಸಿ ಎಂದು ತಿಳಿದುಬಂದಿದೆ.ಮಾಜಿ ಮೇಯರ್ ಕೆ. ಅಶ್ರಫ್ ಸಹಿತ ಹಲವರು ಗಂಭೀರ ಗಾಯಗೊಂಡಿದ್ದು, ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿದೆ.



ಮಂಗಳೂರಿನಲ್ಲಿ ಉದ್ರಿಕ್ತ ವಾತಾವರಣ ಕರ್ಫ್ಯೂ ಜಾರಿ:
ಪೌರತ್ವ ಕಾಯ್ದೆಯನ್ನು ವಿರೋಧಿಸಿ ನಗರದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಇಂದು ಮಧ್ಯಾಹ್ನ ಆರಂಭಗೊಂಡ ಪ್ರತಿಭಟನೆ ಇನ್ನೂ ನಿಯಂತ್ರಣಕ್ಕೆ ಬಾರದೆ ಅಲ್ಲಲ್ಲಿ ಪ್ರತಿಭಟನಕಾರರು ಜಮಾಯಿಸಿದ್ದಾರೆ. ಪ್ರತಿಭಟನಕಾರರು ಕಲ್ಲುತೂರಾಟ ನಡೆಸಿದ್ದು, ಸ್ಟೇಟ್ ಬ್ಯಾಂಕ್ ಸುತ್ತಮುತ್ತಲ ಪರಿಸರದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣಗೊಂಡಿದೆ. ನೆಲ್ಲಿಕಾಯಿ ರಸ್ತೆಯಲ್ಲಿ ಪ್ರತಿಭಟನಕಾರರು ಟಯರ್ ಗೆ ಬೆಂಕಿ ಹಚ್ಚಿದ್ದಾರೆ.
ಪ್ರತಿಭಟನಕಾರರನ್ನು ಬಂಧಿಸಲು ಈಗಾಗಲೇ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಈ ನಡುವೆ ಟೌನ್ ಹಾಲ್ ಬಳಿ ಪ್ರತಿಭಟನಕಾರರು ಜಮಾಯಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಪಂಪ್ ವೆಲ್ ನಿಂದ ಸ್ಟೇಟ್ ಬ್ಯಾಂಕ್ ಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಸಿಎಎ ವಿರುದ್ಧದ ಪ್ರತಿಭಟನೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಂಗಳೂರು ಕೇಂದ್ರ ಉಪವಿಭಾಗ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪಿ. ಎಸ್. ಹರ್ಷಾ ತಿಳಿಸಿದ್ದಾರೆ.
ಬಂದರ್, ಕದ್ರಿ, ಬರ್ಕೆ, ಉರ್ವ, ಪಾಂಡೇಶ್ವರ ಪ್ರದೇಶಗಳು ಈ ವಲಯದಲ್ಲಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್