ಮಂಗಳೂರು: ಗೋಲಿಬಾರ್ ಹಾಗೂ ಪರಿಸ್ಥಿತಿಯ ಅವಲೋಕನಕ್ಕಾಗಿ ಮಂಗಳೂರಿಗೆ ತೆರಳಿದ್ದ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.ಕಾಂಗ್ರೆಸ್ ನಾಯಕರು ಮಂಗಳೂರಿಗೆ ತೆರಳಲು ಸಿದ್ಧತೆ ನಡೆಸಿ, ಶುಕ್ರವಾರ ಬೆಳಿಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಎಂ.ಬಿ ಪಾಟೀಲ್ ಹಾಗೂ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ನೇತೃತ್ವದ ಮೊದಲ ತಂಡ ತೆರಳಿತ್ತು.
ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಾಂಗ್ರೆಸ್ ನಿಯೋಗ ಗೋಲಿಬಾರ್‌ನಲ್ಲಿ ಮೃತಪಟ್ಟವರ ನಿವಾಸಕ್ಕೆ ತೆರಳಲು ಮುಂದಾದಾಗ ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ಆದರೆ ಕಾಂಗ್ರೆಸ್ ನಿಯೋಗ ಪಟ್ಟು ಹಿಡಿದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.ಮಂಗಳೂರು ವಿಮಾನ ನಿಲ್ದಾಣದಲ್ಲಿಯೇ ನಿಯೋಗವನ್ನು ಪೊಲೀಸರು ವಶಕ್ಕೆ ಪಡೆದು ಅವರನ್ನು ಮಂಗಳೂರು ನಗರದೊಳಗೆ ಬಿಟ್ಟುಕೊಳ್ಳಲಿಲ್ಲ.
ಮಧ್ಯಾಹ್ನದ ನಂತರ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಜಮೀರ್ ಅಹ್ಮದ್ ಮತ್ತಿತರರನ್ನೊಳಗೊಂಡ ಮತ್ತೊಂದು ತಂಡ ಮಂಗಳೂರಿಗೆ ತೆರಳಲು ಸಿದ್ಧತೆ ನಡೆಸಿತ್ತು.ಆದರೆ ವಿಶೇಷ ವಿಮಾನ ಮಂಗಳೂರಿನಲ್ಲಿ ಇಳಿಯಲು ಅನುಮತಿ ನಿರಾಕರಿಸಿದ್ದರಿಂದ ಸಿದ್ದರಾಮಯ್ಯ ಅವರ ಮಂಗಳೂರು ಪ್ರವಾಸ ರದ್ದಾಯಿತು. ಮಂಗಳೂರಿನ ನಗರ ಪ್ರದೇಶದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಮುಂಜಾಗರೂಕತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸರ ಈ ಕ್ರಮವನ್ನು ಕಾಂಗ್ರೆಸ್ ಬಲವಾಗಿ ಖಂಡಿಸಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ