ಬೆಂಗಳೂರು: “ನೀವು ಪ್ರತಿಯೊಂದು ಪ್ರತಿಭಟನೆಯನ್ನು ನಿಷೇಧಿಸುತ್ತಾ ಹೋಗುತ್ತೀರಾ?, ಸೂಕ್ತ ಪ್ರಕ್ರಿಯೆಗಳ ಮೂಲಕ ನೀಡಲಾಗಿದ್ದ ಅನುಮತಿಯನ್ನು ಹೇಗೆ ರದ್ದುಗೊಳಿಸುತ್ತೀರಿ?” ಎಂದು ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಪ್ರಶ್ನಿಸಿದ್ದಾರೆ.
ರಾಜಧಾನಿಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಹೇರಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅಪೀಲುಗಳ ಮೇಲಿನ ವಿಚಾರಣೆ ಸಂದರ್ಭ ಮುಖ್ಯ ನ್ಯಾಯಮೂರ್ತಿ ಮೇಲಿನ ಪ್ರಶ್ನೆಯನ್ನೆತ್ತಿದ್ದಾರೆ.
ಡಿಸೆಂಬರ್ 19ರಿಂದ 21ರ ತನಕ ರಾಜಧಾನಿಯಲ್ಲಿ ಹೇರಲಾಗಿರುವ ನಿಷೇಧಾಜ್ಞೆಯ ಕಾನೂನುಬದ್ಧತೆಯನ್ನು ಪರಿಶೀಲಿಸುವುದಾಗಿಯೂ ನ್ಯಾಯಾಲಯ ಹೇಳಿದೆ.
“ಪ್ರತಿಯೊಂದು ಪ್ರತಿಭಟನೆ ಹಿಂಸಾತ್ಮಕವಾಗಲಿದೆ ಎಂದು ಊಹಿಸಿ ಸರಕಾರ ಕ್ರಮ ಕೈಗೊಳ್ಳುವುದು ಸರಿಯೇ?, ಸರಕಾರದ ನಿರ್ಧಾರವನ್ನು ಒಪ್ಪದ ಒಬ್ಬ ಸಾಹಿತಿ ಅಥವಾ ಕಲಾವಿದೆ ಶಾಂತಿಯುತ ಪ್ರತಿಭಟನೆ ನಡೆಸುವುದು ಸಾಧ್ಯವಿಲ್ಲವೇ?” ಎಂದೂ ನ್ಯಾಯಾಲಯ ಪ್ರಶ್ನಿಸಿದೆ.
ಆರಂಭದಲ್ಲಿ ಪ್ರತಿಭಟನೆಗೆ ಅನುಮತಿ ನೀಡಿ ನಂತರ ಸೆಕ್ಷನ್ 144 ಹೇರಿ ಪ್ರತಿಭಟನೆಗೆ ಅವಕಾಶವನ್ನು ಸರಕಾರ ನಿರಾಕರಿಸಿತ್ತೇ ಎಂಬ ಪ್ರಶ್ನೆಗೆ ಉತ್ತರಿಸುವಂತೆ ನ್ಯಾಯಾಲಯ ಅಡ್ವಕೇಟ್ ಜನರಲ್ ಅವರಿಗೆ ಹೇಳಿದೆ.ಗುರುವಾರ ರಾಜಧಾನಿಯಲ್ಲಿ ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ, ಶಿವಾಜಿನಗರ ಕಾಂಗ್ರೆಸ್ ಶಾಸಕ ರಿಝ್ವಾನ್ ಅರ್ಷದ್ ಸಹಿತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ