ರಿಯಾದ್: ಮೊಬೈಲ್ ಬಳಕೆದಾರರನ್ನು ಸೌದಿಯಲ್ಲಿ ವಾಟ್ಸ್ ಆ್ಯಪ್ ಮೂಲಕ ವ್ಯಾಪಕವಾಗಿ ಹ್ಯಾಕ್ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ಕಳೆದ ವರ್ಷ 2,600 ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ವರದಿಯಾಗಿದ್ದು, ಹ್ಯಾಕ್ ಮಾಡಿದ ವಾಟ್ಸ್ ಆ್ಯಪ್ ಅನ್ನು ಮೊಬೈಲ್ ಫೋನ್‌ನಿಂದ ಅಳಿಸಿ,ಹೊಸತನ್ನು ಸ್ಥಾಪಿಸಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.
ಬಳಕೆದಾರರನ್ನು ವಾಟ್ಸ್ ಆ್ಯಪ್ ಗುಂಪಿಗೆ ಸೇರಲು ಆಹ್ವಾನಿಸುವ ಮೂಲಕ ಹ್ಯಾಕರ್ಸ್ ವಂಚಿಸಲಾಗುತ್ತದೆ. ಈ ಸಂದೇಶಗಳಲ್ಲಿನ ಲಿಂಕ್‌ಗಳನ್ನು ಕ್ಲಿಕ್ ಮಾಡಿದಾಗ ಅಥವಾ ಸಂದೇಶದಲ್ಲಿನ ಕೋಡ್ ವಿನಿಮಯ ಮಾಡಿಕೊಂಡಾಗ ವಾಟ್ಸ್ ಆ್ಯಪ್ ಹ್ಯಾಕ್ ಆಗುತ್ತದೆ. ಹಾಗೆ ಹ್ಯಾಕ್ ಮಾಡಲಾದ ಫೋನ್‌ನ ಸಂಖ್ಯೆಯಿಂದ ಸ್ನೇಹಿತರು ಮತ್ತು ಪರಿಚಯಸ್ಥರಿಗೆ ಸಂದೇಶವನ್ನು ಕಳುಹಿಸಿ ಹ್ಯಾಕರ್ ಹಣ ಕಳುಹಿಸುವುದಾಗಿ ತಿಳಿಸಿ ಅವರ ಎಟಿಎಂ ನಕಲನ್ನು ಕೇಳುತ್ತಾರೆ ಈ ಬಗ್ಗೆ ಹ್ಯಾಕ್ ಮಾಡಲ್ಪಟ್ಟ ವ್ಯಕ್ತಿಗೆ ಯಾವುದೇ ಮಾಹಿತಿ ಲಭ್ಯವಾಗುವುದಿಲ್ಲ.
ಹ್ಯಾಕರ್ ಸಂದೇಶಗಳನ್ನು ಕಳುಹಿಸುತ್ತಿದ್ದಾನೆ ಎಂದು ತಿಳಿಯದೆ ಪ್ರತಿಕ್ರಿಯಿಸಿದಾಗ, ಅವನ ಮೊಬೈಲ್ ಫೋನ್ ಕೂಡ ಹ್ಯಾಕ್ ಆಗುತ್ತದೆ. ಹ್ಯಾಕ್‌ಗೊಳಗಾದವರು ತಿಳಿಯದೆ ತನ್ನ ಖಾತೆಯಿಂದ ಹಣವನ್ನು ಹಿಂಪಡೆಯಲು ಮತ್ತು ಮೊಬೈಲ್ ಸಂಗ್ರಹವಾಗಿರುವ ಡೇಟಾವನ್ನು ಕದಿಯಲು ಅನುವು ಮಾಡಿಕೊಡುತ್ತದೆ. ಅಪರಿಚಿತರ ಸಂಖ್ಯೆಗಳಿಂದ ಬರುವ ಅಂತಹ ಸಂದೇಶಗಳಿಗೆ ಪ್ರತಿಕ್ರಿಯಿಸದಂತೆ ಮತ್ತು ಪರಿಚಿತ ಸಂಖ್ಯೆಗಳಿಂದ ಸಂದೇಶಗಳನ್ನು ಸ್ವೀಕರಿಸಿದರೆ ಅವರು ನಿಜವಾದ ವ್ಯಕ್ತಿ ಎಂದು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳು ಜನರನ್ನು ಎಚ್ಚರಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು