ರಿಯಾದ್: ಸೌದಿ ಭದ್ರತಾ ವಿಭಾಗವು ಸಾಮಾಜಿಕ ಮಾಧ್ಯಮಗಳ ಮೂಲಕ ಧ್ವೇಷ ಪ್ರಚಾರ ಮತ್ತು ಪಂಥೀಯತೆಯನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಧ್ವೇಷ ಅಭಿಯಾನ ನಡೆಸಿದ ಅನೇಕರನ್ನು ಭದ್ರತಾ ಪಡೆಗಳು ವಶಕ್ಕೆ ತೆಗೆದುಕೊಂಡಿವೆ.
ಸೋಷಿಯಲ್ ಮೀಡಿಯಾವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕೋಮುವಾದ ಮತ್ತು ಪಂಥೀಯತೆಯನ್ನು ಉತ್ತೇಜಿಸುವವರ ವಿರುದ್ಧ ಈ ಕ್ರಮವನ್ನು ತೀವ್ರಗೊಳಿಸಲಾಗಿದೆ. ಭದ್ರತಾ ಇಲಾಖೆಯು ನಿನ್ನೆಯಿಂದ ದೇಶದ ನಿವಾಸಿಗಳು ಮತ್ತು ವಿದೇಶಿಯರಿಗೆ ಎಚ್ಚರಿಕೆಗಳನ್ನು ಕಳುಹಿಸಲು ಪ್ರಾರಂಭಿಸಿದೆ.
ಅಂತಹ ಪೋಸ್ಟ್ಗಳ ಬಗ್ಗೆ ಕೂಡಲೇ ತಿಳಿಸುವಂತೆ ಅಧಿಕಾರಿಗಳು ಸಂಬಂಧಪಟ್ಟವರಿಗೆ ಸಲಹೆ ನೀಡಿದ್ದು, ದೇಶದ ಕಾನೂನುಗಳು, ಆಡಳಿತಗಾರರು ಮತ್ತು ಧಾರ್ಮಿಕ ಚಿಹ್ನೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಕರ್ನಾಟಕದ ಕುಂದಾಪುರ ನಿವಾಸಿ ಹರೀಶ್ ಬಂಗೇರಾರನ್ನು ಸೌದಿ ಭದ್ರತಾ ಪಡೆ ಸೋಮವಾರ ವಶಕ್ಕೆ ತೆಗೆದುಕೊಂಡಿದೆ.
ದಮ್ಮಾಮ್ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹರೀಶ್, ಸೌದಿ ಆಡಳಿತಗಾರ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ರನ್ನು ಖಂಡಿಸಿ ಮತ್ತು ಮಕ್ಕಾದ ಪವಿತ್ರ ಕಅಬಾವನ್ನು ನೆಲಸಮಗೊಳಿಸುವಂತೆ ಒತ್ತಾಯಿಸಿ ಪೋಸ್ಟ್ ಮಾಡಿದ್ದು, ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವುದನ್ನು ಗಮನಿಸಿದ ಆತ ಕೆಲಸ ಮಾಡುತ್ತಿದ್ದ ಕಂಪನಿಯು, ಹರೀಶ್ರನ್ನು ಭದ್ರತಾ ಇಲಾಖೆಗೆ ಒಪ್ಪಿಸಿದೆ. ಆದರೆ ಅದು ತನ್ನ ಹೆಸರಿನಲ್ಲಿ ಯಾರೋ ನಕಲಿ ಖಾತೆ ತೆರೆದು ಪೋಸ್ಟ್ ಮಾಡಿರುವುದಾಗಿ ಹರೀಶ್ ತಿಳಿಸಿದ್ದು, ತನಿಖೆ ನಡೆಸಲಾಗುತ್ತಿದೆ.
ರಿಯಾದ್ನ ಮಲಾಸ್ನಲ್ಲಿ ಪೌರತ್ವ ಕಾಯ್ದೆ ಪರವಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಸಂಘ ಪರಿವಾರ ಪರ ಸಂಘದವರನ್ನು ಕೂಡ ಭದ್ರತಾ ಪಡೆಗಳು ವಶಕ್ಕೆ ತೆಗೆದುಕೊಂಡಿವೆ. ಸಾಮಾಜಿಕ ಮಾಧ್ಯಮಗಳ ಮೂಲಕ ಧಾರ್ಮಿಕ ಧ್ವೇಷ ಮತ್ತು ಕೋಮುವಾದ ಹರಡುವವರಿಗೆ ಕಠಿಣ ಶಿಕ್ಷೆ ನೀಡುವ ದೇಶಗಳ ಪೈಕಿ ಸೌದಿ ಅರೇಬಿಯಾ ಕೂಡ ಒಂದಾಗಿದೆ. ಸೋಷಿಯಲ್ ಮೀಡಿಯಾ ದುರುಪಯೋಗ ಮಾಡುವವರಿಗೆ 15 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5 ಲಕ್ಷ ರಿಯಾಲ್ ವರೆಗೆ ದಂಡ ವಿಧಿಸಬಹುದಾಗಿದೆ.
ಭಾರತೀಯರು ಸಮೇತ ವಿದೇಶಿಗರು ವಿವಿಧ ಅರಬ್ ರಾಷ್ಟ್ರಗಳಲ್ಲಿ ದುಡಿಯುತ್ತಿದ್ದು, ಸರ್ವ ಧರ್ಮೀಯರು ಪರಸ್ಪರ ಸಾಹೋದರ್ಯತೆಯಿಂದ ಬಾಳುತ್ತಿದ್ದಾರೆ. ಈ ನಡುವೆ ಸಾಮಾಜಿಕ ತಾಣದಲ್ಲಿ ಕೋಮು ಧ್ವೇಶವನ್ನು ಹರಡಿ ಪರಸ್ಪರ ಕಚ್ಚಾಡುವಂತೆ ಮಾಡುವ ಪರಿ ವಲಸಿಗರಿಗೆ ಅಪಾಯವನ್ನು ತಂದೊಡ್ಡಲಿದೆ. ಯಾವನೋ ಒಬ್ಬ ತನ್ನ ಕಿಡಿಗೇಡಿ ತನ ತೋರಿಸುವ ಮೂಲಕ ಎಲ್ಲಾ ವಿದೇಶೀಯರು ಆಡಳಿತ ವರ್ಗದ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಆದ್ದರಿಂದ ತಾವು ಉದ್ಯೋಗದಲ್ಲಿರುವ ದೇಶದ ಕಾನೂನಿಗೆ ಬದ್ಧವಾಗಿ ಜೀವಿಸುವುದು ಕಡ್ಡಾಯವಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ