ರಿಯಾದ್: ಯುಎಇ, ಕುವೈತ್ ಮತ್ತು ಬಹ್ರೇನ್ನಲ್ಲಿ ಕಾನೂನುಬದ್ಧವಾಗಿ ನೆಲೆಸಿರುವ ವಿದೇಶಿಯರಿಗೆ ವಾರಾಂತ್ಯದಲ್ಲಿ ಸೌದಿ ಅರೇಬಿಯಾಕ್ಕೆ ಭೇಟಿ ನೀಡಲು ಅವಕಾಶವಿದೆ. ದೇಶದ ವಿವಿಧ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶದ ಭಾಗವಾಗಿ ಈವೆಂಟ್ ವೀಸಾ ಎನ್ನಲಾಗುವ ಉಚಿತ ವೀಸಾ ನೀಡಲಾಗುತ್ತದ್ದು, ಗಡಿ ಚೆಕ್ ಪೋಸ್ಟ್ಗಳಿಂದ ನೇರವಾಗಿ ವೀಸಾಗಳನ್ನು ಒದಗಿಸುವ ಯೋಜನೆ ಇದಾಗಿದೆ.
ರಿಯಾದ್ ಋತುವಿನ ಅಂತಿಮ ಹಂತದಲ್ಲಿ ಈ ಸೌಲಭ್ಯ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾರಾಂತ್ಯದ ರಜಾದಿನಗಳನ್ನು ಆಚರಿಸಲು ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ಮಾತ್ರ ಉಚಿತ ವೀಸಾ ಲಭ್ಯವಿದೆ. ಈ ಯೋಜನೆಯು ದೇಶದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಚ್ಚಿಸುವವರ ಪ್ರಕ್ರಿಯೆಯನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ 49 ದೇಶಗಳ ಪ್ರವಾಸಿಗರನ್ನು ಆಕರ್ಷಿಸಲು ವೀಸಾ ಮತ್ತು ಇ-ಟೂರಿಸ್ಟ್ ವೀಸಾಗಳನ್ನು ನೀಡಲಾಗಿತ್ತು.
ಸೌದಿ ಅರೇಬಿಯಾಕ್ಕೆ ಪ್ರಸ್ತುತ 41 ಮಿಲಿಯನ್ ಪ್ರವಾಸಿಗರು ಆಗಮಿಸುತ್ತಿದ್ದಾರೆ. 2030 ರ ವೇಳೆಗೆ
100 ಮಿಲಿಯನ್ ಪ್ರವಾಸಿಗರನ್ನು ನಿರೀಕ್ಷಿಸುತ್ತಿದ್ದು,
2030 ರ ವೇಳೆಗೆ ಮೊದಲ ಐದು ಪ್ರವಾಸಿ ಆಕರ್ಷಣೀಯ ದೇಶಗಳಲ್ಲೊಂದಾಗಿ ಸೌದಿ ಅರೇಬಿಯಾ ಮಾರ್ಪಟ್ಟು, ಒಟ್ಟು ಆದಾಯವು ಶೇಕಡಾ ಮೂರರಿಂದ 10 ಕ್ಕೆ ಏರುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು