ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡುವ ಮೂಲಕ ಹರಿಹಾಯ್ದಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸ್ ಗೋಲಿಬಾರ್ಗೆ ಬಲಿಯಾದವರು ಗಲಭೆಕೋರರು, ಅಪರಾಧ ಮಾಡಿದವರಿಗೆ ಪರಿಹಾರ ನೀಡಲಾಗುವುದಿಲ್ಲ ಎಂದು ಸಿಎಂ ಬಿಎಸ್ವೈ ಹೇಳಿಕೆ ನೀಡಿದ ಬೆನ್ನಲ್ಲೇ ಎಚ್ಡಿಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಎಸ್ವೈ ಆಡಳಿತದಲ್ಲಿ ಜನರಿಗೆ, ಹೋರಾಟಗಾರರಿಗೆ ರಕ್ಷಣೆ ಇಲ್ಲ. ಎಷ್ಟೇ ಆದರೂ ಇದು ಅನರ್ಹ ಸರ್ಕಾರವಲ್ಲವೇ? ಎಂದು ಎಚ್ಡಿಕೆ ಪ್ರಶ್ನಾರ್ಥವಾಗಿ ವ್ಯಂಗ್ಯವಾಡಿದ್ದಾರೆ. ಮುಂದುವರೆದು, ನಾಲ್ಕು ದಿನ ಕಳೆದ ನಂತರ ಗೋಲಿಬಾರಿಗೆ ಬಲಿಯಾದವರಿಬ್ಬರೂ ಗಲಭೆಕೋರರು ಎಂದು ಬಿಂಬಿಸಿರುವ ಉದ್ದೇಶವಾದರೂ ಏನು? ಇದನ್ನು ನೀವು ಸುಲಭವಾಗಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ, ಜನತೆಗೆ ಉತ್ತರ ನೀಡಬೇಕಾಗುತ್ತದೆ. ಅಮಾಯಕರ ಮೇಲೆ ನಿಮ್ಮ ನೀಚ ಕೆಲಸದ ತಪ್ಪನ್ನು ಹೊರಿಸಿದರೆ ಮುಂದಿನ ದಿನಗಳಲ್ಲಿ ಪ್ರಾಯಶ್ಚಿತಕ್ಕೆ ತಯಾರಾಗಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.
ಯಡಿಯೂರಪ್ಪನವರು ಮಂಗಳೂರಿಗೆ ಭೇಟಿ ನೀಡಿದಂದೇ ಗೋಲಿಬಾರಿಗೆ ಬಲಿಯಾದವರು ಗಲಭೆಯಲ್ಲಿ ಭಾಗಿಯಾದವರು ಎಂದು ಪೊಲೀಸರು ಯಡಿಯೂರಪ್ಪನವರಿಗೆ ಮಾಹಿತಿ ನೀಡಿರಲಿಲ್ಲವೇ? ಅಂದು ಯಡಿಯೂರಪ್ಪನವರಿಗೆ ಆ ಎಡಿಟೆಡ್ ವೀಡಿಯೋ ತೋರಿಸಿರಲಿಲ್ಲವೇ? ಅಭಿಪ್ರಾಯ ಬೇಧವನ್ನು ಬಿಜೆಪಿ ಸಹಿಸುವುದಿಲ್ಲ. ಹೋರಾಟಗಳನ್ನು, ಹೋರಾಟಗಾರರನ್ನು ‘so called ಹೋರಾಟಗಾರ’ ಯಡಿಯೂರಪ್ಪ ಸಹಿಸುವುದಿಲ್ಲ. ಬಿಎಸ್ವೈ ನಿಜವಾಗಿಯೂ ಹೋರಾಟಗಾರರಾಗಿದ್ದರೆ ಪರಿಹಾರ ಮಂಜೂರು ಮಾಡಲಿ. ಇಲ್ಲವೇ ತಮ್ಮದು ಕೊಲೆಗಡುಕ ಸರ್ಕಾರ ಎಂದು ಒಪ್ಪಲಿ ಎಂದು ಸವಾಲು ಹಾಕಿದ್ದಾರೆ.
ಸತ್ತವರ ಹೆಸರು ಆರೋಪಿಗಳ ಪಟ್ಟಿಯಲ್ಲಿದೆ ಎಂದು ಪರಿಹಾರ ವಂಚನೆಗೆ ಬಿಎಸ್ವೈ ನೀಡಿರುವ ಸಬೂಬು ಎಂಥ ಕ್ಷುಲ್ಲಕ? ಹೋರಾಟ ಅಪರಾಧವೇ? ಹೋರಾಟ ಸಂವಿಧಾನ ಬದ್ಧ ಹಕ್ಕು. ಹೋರಾಟಗಳನ್ನು ಹತ್ತಿಕ್ಕುವವರು ಸಂವಿಧಾನ ವಿರೋಧಿಗಳು. ದೇಶಭ್ರಷ್ಟರು. ಮಂಗಳೂರಿನಲ್ಲಿ ಆ’ರಕ್ಷಕ’ರಿಂದಲೇ ಪರಿಸ್ಥಿತಿಯನ್ನು ಪ್ರಕ್ಷುಬ್ಧಗೊಳಿಸಿದ ಸರ್ಕಾರ ಇಬ್ಬರು ಅಮಾಯಕರನ್ನು ಕೊಂದಿದ್ದೂ ಅಲ್ಲದೇ ಪರಿಹಾರವನ್ನೂ ವಂಚಿಸಿದೆ. ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿ ಈಗ ಇಲ್ಲ ಎನ್ನುತ್ತಿರುವ ಬಿಎಸ್ವೈ ವಚನ ಭ್ರಷ್ಟ, ಸುಳ್ಳುಗಾರ ಎಂದು ಎಚ್ಡಿಕೆ ಹರಿಹಾಯ್ದಿದ್ದಾರೆ















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ