janadhvani

Kannada Online News Paper

ವಿಶ್ವೇಶ್ವರ ತೀರ್ಥ ಪೇಜಾವರ ಶ್ರೀ ನಿಧನ- ಗಣ್ಯರ ಸಂತಾಪ

ಉಡುಪಿ,ಡಿ.29: ತೀವ್ರ ಉಸಿರಾಟದ ಸಮಸ್ಯೆ ಹಾಗೂ ನ್ಯೂಮೋನಿಯಾದಿಂದ ಬಳಲುತ್ತಿದ್ದ ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ನಿಧನರಾಗಿದ್ದಾರೆ.

8 ದಿನಗಳ ಹಿಂದಷ್ಟೇ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಶ್ರೀಗಳು ಡಿ.20ರಂದು ಮುಂಜಾನೆ 5ಕ್ಕೆ ಮಣಿಪಾಲ ಆಸ್ಪತ್ರೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ದಾಖಲಾಗಿದ್ದರು. ಅಂದಿನಿಂದ ಪ್ರಜ್ಞೆ ಮರಳಿ ಬಂದಿರಲಿಲ್ಲ. ನ್ಯೂಮೋನಿಯಾ ನಿಯಂತ್ರಣಕ್ಕೆ ಬಂದರೂ, ದಿನದಿಂದ ದಿನಕ್ಕೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟು, ಅವರನ್ನು ಪ್ರಜ್ಞೆ ಮರಳಿಸುವ ಪ್ರಯತ್ನಗಳೆಲ್ಲವೂ ವಿಫಲಗೊಂಡಿವೆ. ಆರೋಗ್ಯ ತೀವ್ರ ಕುಸಿದಿದ್ದು, ಮೆದುಳು ಕಾರ್ಯ ಕುಂಠಿತಗೊಂಡಿತ್ತು.

ಪ್ರಧಾನಿ ಸಂತಾಪ: ವಿಶ್ವೇಶ್ವರ ತೀರ್ಥ ಪೇಜಾವರ ಶ್ರೀ ನಿಧನಕ್ಕೆ ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ವರ್ಷದ ಗುರುಪೂರ್ಣಿಮೆಯಂದು ಶ್ರೀಗಳನ್ನು ಭೇಟಿ ಮಾಡಿದ ಕ್ಷಣವನ್ನು ನೆನೆದ ಮೋದಿ, ಶ್ರೀಗಳಿಂದ ಹಲವು ವಿಚಾರಗಳನ್ನು ಕಲಿಯುವ ಅವಕಾಶ ಸಿಕ್ಕಿದ್ದು ಆಶೀರ್ವಾದವೆಂದು ಭಾವಿಸುತ್ತೇನೆ ಎಂದಿದ್ದಾರೆ. ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳು ಕೃಷ್ಣೈಕ್ಯರಾದರು ಎಂಬ ವಿಷಯ ತೀವ್ರ ಆಘಾತವನ್ನುಂಟುಮಾಡಿದೆ. ಸಮಾಜದ ಅಸಮಾನತೆಗಳ ವಿರುದ್ಧ ಧ್ವನಿಯಾಗಿದ್ದ ಶ್ರೀಗಳ ಚಿಂತನೆಗಳು ನಮ್ಮೆಲ್ಲರಿಗೂ ಮಾದರಿ. ಶ್ರೀಗಳ ಭಕ್ತವೃಂದಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.ಪರಮಪೂಜ್ಯ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.
ಸದಾ ಜೀವನೋತ್ಸಾಹದ ಚಿಲುಮೆಯಂತಿದ್ದ ಶ್ರೀ ಗಳು ಸಮಾಜಮುಖಿ ನಿಲುವಿನ ಶ್ರೇಷ್ಠ ಸಂತರಾಗಿದ್ದರು. ಸಮಾಜಕ್ಕೆ ಮಾರ್ಗದರ್ಶಕರಾಗಿದ್ದ ಶ್ರೀಗಳ ನಿಧನದಿಂದ ನಾಡು ಬಡವಾಗಿದೆ.ಮಾರ್ಗದರ್ಶನದ ಜ್ಯೋತಿಯಾಗಿದ್ದ ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳು ಲಕ್ಷಾಂತರ ಜನರ ಮನಸ್ಸಿನಲ್ಲಿ ಅಜರಾಮರರಾಗಿರುತ್ತಾರೆ. ಸೇವೆ ಮತ್ತು ಆಧ್ಯಾತ್ಮಿಕತೆಯಲ್ಲಿ ಶಕ್ತಿಶಾಲಿಯಾಗಿದ್ದ ಶ್ರೀಗಳು ನ್ಯಾಯಯುತ ಮತ್ತು ಸಹಾನುಭೂತಿಯ ಸಮಾಜಕ್ಕಾಗಿ ನಿರಂತರವಾಗಿ ಕೆಲಸ ಮಾಡಿದರು. ಓಂ ಶಾಂತಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳು ಕೃಷ್ಣೈಕ್ಯರಾದರು ಎಂಬ ವಿಷಯ ತೀವ್ರ ಆಘಾತವನ್ನುಂಟುಮಾಡಿದೆ. ಸಮಾಜದ ಅಸಮಾನತೆಗಳ ವಿರುದ್ಧ ಧ್ವನಿಯಾಗಿದ್ದ ಶ್ರೀಗಳ ಚಿಂತನೆಗಳು ನಮ್ಮೆಲ್ಲರಿಗೂ ಮಾದರಿ.
ಶ್ರೀಗಳ ಭಕ್ತವೃಂದಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀಗಳ ದೇಹಾಂತ್ಯದಿಂದ ಹಿಂದೂ ಧರ್ಮದ ಪ್ರಮುಖ ಮಾರ್ಗದರ್ಶಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಅವರು ವಿಷಾದಿಸಿದ್ದಾರೆ. ಶ್ರೀಗಳು ಎಳೆ ವಯಸ್ಸಿನಲ್ಲಿಯೇ ಸನ್ಯಾಸ ದೀಕ್ಷೆಯನ್ನು ಸ್ವೀಕರಿಸಿ, ಪೇಜಾವರ ಮಠಾಧೀಶರಾದವರು. ಅಷ್ಟಮಠಗಳ ಪರಂಪರೆಯಲ್ಲಿ ಅತಿ ಹೆಚ್ಚು ಬಾರಿ ಉಡುಪಿ ಪರ್ಯಾಯದ ನೇತೃತ್ವ ವಹಿಸಿದ ಹೆಗ್ಗಳಿಕೆ ಶ್ರೀಗಳದ್ದು. ಆಧ್ಯಾತ್ಮಿಕ ಸಾಧನೆಯೊಂದಿಗೆ ಸಮಾಜ ಸೇವೆಯನ್ನು ಉಸಿರಾಗಿಸಿಕೊಂಡವರು ಅವರು ಎಂದು ಬಿಎಸ್​ವೈ ಸ್ಮರಿಸಿದರು.ದಲಿತರೊಂದಿಗೆ ಸಹಭೋಜನದಂತಹ ಕ್ರಮಗಳಿಂದ ಹಿಂದೂ ಧರ್ಮದಲ್ಲಿ ಅಸಮಾನತೆಯ ಕೂಗು ಕ್ಷೀಣಿಸುವಂತೆ ಮಾಡಲು ಪ್ರಯತ್ನಿಸಿದವರು. ಹಿಂದೂ ಧರ್ಮದ ಉತ್ಥಾನಕ್ಕೆ ಶ್ರೀಗಳ ಕೊಡುಗೆ ಅವಿಸ್ಮರಣೀಯ ಎಂದರು.ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವನ್ನು ನೋಡುವ ಅವರ ಅಪೇಕ್ಷೆ ನೆರವೇರಲಿಲ್ಲ ಎಂದು ಯಡಿಯೂರಪ್ಪ ದುಃಖಿಸಿದ್ದಾರೆ. ಶ್ರೀಕೃಷ್ಣನು ಅವರ ಆತ್ಮಕ್ಕೆ ಮೋಕ್ಷ ಕರುಣಿಸಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಕ್ತಾದಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಸ್ವಾಮೀಜಿ ನಿಧನಕ್ಕೆ ಸಂತಾಪ ಸೂಚಿಸಿದ್ದು, ಹಿಂದೂ ಧರ್ಮದ ಸುಧಾರಣೆಗೆ ಅವಿರತವಾಗಿ ಪ್ರಯತ್ನ ಮಾಡುತ್ತಾ ಬಂದ, ನೇರ ನಡೆ-ನುಡಿಯ ಮೂಲಕ ಎಲ್ಲರ ಪ್ರೀತಿ-ಅಭಿಮಾನಕ್ಕೆ ಪಾತ್ರರಾಗಿದ್ದ, ಸದಾ ಹೊಸ ಆಲೋಚನೆಗಳ ಪ್ರಯೋಗ ಶೀಲ ಮನಸ್ಸು ಹೊಂದಿದ್ದ, ಪೂಜ್ಯರಾದ ಪೇಜಾವರ ಮಠದ ವಿಶ್ವೇಶತೀರ್ಥ, ಶ್ರೀಗಳ ನಿಧನಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.ಹಿಂದೂ ಧರ್ಮದ ಸುಧಾರಣೆಗೆ ಅವಿರತವಾಗಿ ಪ್ರಯತ್ನ ಮಾಡುತ್ತಾ ಬಂದ.. ನೇರ ನಡೆ-ನುಡಿಯ ಮೂಲಕ ಎಲ್ಲರ ಪ್ರೀತಿ-ಅಭಿಮಾನಕ್ಕೆ ಪಾತ್ರರಾಗಿದ್ದ… ಸದಾ ಹೊಸ ಆಲೋಚನೆಗಳ ಪ್ರಯೋಗ ಶೀಲ ಮನಸ್ಸು ಹೊಂದಿದ್ದ… ಪೂಜ್ಯರಾದ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ನಿಧನಕ್ಕೆ ನನ್ನ ಸಂತಾಪಗಳು.

ಎಚ್ ಡಿ ಕುಮಾರ ಸ್ವಾಮಿ: ಪರಮಪೂಜ್ಯ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.ಸದಾ ಜೀವನೋತ್ಸಾಹದ ಚಿಲುಮೆಯಂತಿದ್ದ ಶ್ರೀ ಗಳು ಸಮಾಜಮುಖಿ ನಿಲುವಿನ ಶ್ರೇಷ್ಠ ಸಂತರಾಗಿದ್ದರು. ಸಮಾಜಕ್ಕೆ ಮಾರ್ಗದರ್ಶಕರಾಗಿದ್ದ ಶ್ರೀಗಳ ನಿಧನದಿಂದ ನಾಡು ಬಡವಾಗಿದೆ.

ನಟ ಉಪೇಂದ್ರ ಕೂಡ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪೇಜಾವರ ಶ್ರೀಗಳು ಎಂದೆಂದೂ ಅಮರ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಪೇಜಾವರ ಶ್ರೀಗಳು ವಿಧಿವಶ ಹಿನ್ನೆಲೆ, ದಾವಣಗೆರೆಯಲ್ಲಿ ಸಂಸದ ಜಿ ಎಂ ಸಿದ್ದೇಶ್ವರ್ ಸಂತಾಪ ಸೂಚಿಸಿದ್ದಾರೆ. ಶ್ರೀಗಳ ಅಗಲಿಕೆ ನೋವುಂಟು ಮಾಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.