ರಿಯಾದ್: ಸೌದಿಯಲ್ಲಿ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಂದ ಸರಕಾರ ವಸೂಲು ಮಾಡುವ ಶುಲ್ಕವನ್ನು ಹೆಚ್ಚಿಸುವ ಉದ್ದೇಶವನ್ನು ಸರಕಾರ ಹೊಂದಿಲ್ಲ ಎಂದು ಸಚಿವಾಲಯ ತಿಳಿಸಿದೆ.
ಅಸ್ತಿತ್ವದಲ್ಲಿರುವ ಶುಲ್ಕವನ್ನು ಹೆಚ್ಚಿಸಲು ಮತ್ತು ತಿದ್ದುಪಡಿ ಮಾಡಲು ಬಯಸುವ ಸರಕಾರಿ ಇಲಾಖೆಗಳು ಅದರ ಕಾರ್ಯಸಾಧ್ಯತಾ ಅಧ್ಯಯನಗಳು ಮತ್ತು ಪ್ರಾಯೋಗಿಕ ವಿಧಾನಗಳನ್ನು ಸಚಿವಾಲಯಕ್ಕೆ ಸಲ್ಲಿಸಬೇಕು ಎಂದು ಸಚಿವಾಲಯ ಶಿಫಾರಸು ಮಾಡಿದೆ.
ವಾಣಿಜ್ಯ ಮತ್ತು ಹೂಡಿಕೆ ಸಚಿವಾಲಯ ಈ ಘೋಷಣೆ ಮಾಡಿದ್ದು, ಈ ಮೊದಲು, ಸರಕಾರವು ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ವಿಧಿಸುವ ಒಟ್ಟು ಶುಲ್ಕವನ್ನು 2020 ರವರೆಗೆ ಹೆಚ್ಚಿಸುವುದಿಲ್ಲ ಎಂದು ಸಚಿವಾಲಯ ಹೇಳಿದ್ದವು. ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳನ್ನು ಅಧ್ಯಯನ ಮಾಡದೆ ಅಸ್ತಿತ್ವದಲ್ಲಿರುವ ಶುಲ್ಕವನ್ನು ಹೆಚ್ಚಿಸುವುದು ಅಥವಾ ಮಾರ್ಪಡಿಸುವಂತೆ ಒತ್ತಡ ಹೇರಬಾರದೆಂದು ಎಲ್ಲಾ ಸಂಬಂಧಿತ ಸರಕಾರಿ ಇಲಾಖೆಗಳಿಗೆ ಸೂಚಿಸಲಾಗಿದೆ.
ಈ ನಿರ್ಧಾರವು ದೇಶದ ಹೂಡಿಕೆ ವಾತಾವರಣದಲ್ಲಿ ಸ್ಪರ್ಧೆಯನ್ನು ಹೆಚ್ಚಿಸುವ ಮತ್ತು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಪ್ರೋತ್ಸಾಹಿಸುವ ಭಾಗವಾಗಿದೆ. ಹಣಕಾಸಿನ ಸಮತೋಲನ ಕಾರ್ಯಕ್ರಮವು ಈ ಹಿಂದೆ ಅವುಗಳನ್ನು ರಕ್ಷಿಸಲು ಅಂತಹ ಸಂಸ್ಥೆಗಳಿಂದ ಹೆಚ್ಚಿನ ಶುಲ್ಕ ವಿಧಿಸದಂತೆ ಸರಕಾರಕ್ಕೆ ಸೂಚಿಸಿತ್ತು. ದೇಶದಲ್ಲಿ ಖಾಸಗಿ ವಲಯ ಎದುರಿಸುತ್ತಿರುವ ಸವಾಲುಗಳ ಕುರಿತು ವಾಣಿಜ್ಯ ಮತ್ತು ಹೂಡಿಕೆ ಸಚಿವಾಲಯ ಮಂಡಿಸಿರುವ ಪ್ರಸ್ತಾಪಗಳ ಆಧಾರದ ಮೇಲೆ ಹೊಸ ನಿರ್ಧಾರ ತೆಗೆದುಕೊಳ್ಳಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ