ಕುವೈತ್ ಸಿಟಿ: ಕುವೈತ್ನಲ್ಲಿ ಇನ್ನು ಮುಂದೆ ವೀಸಾ ಮತ್ತು ಇಖಾಮಾ ನವೀಕರಣಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಇಖಾಮಾ ಸೇವೆಗಳನ್ನು ಸಂಪೂರ್ಣವಾಗಿ ಆನ್ಲೈನ್ ಮಾಡುವ ಭಾಗವಾಗಿ ಈ ನಡೆ ಎನ್ನಲಾಗಿದೆ.
ಗೃಹ ಸಚಿವಾಲಯದ ವೆಬ್ಸೈಟ್ನಲ್ಲಿ ಸ್ಥಾಪಿಸಲಾದ ಹೊಸ ಪುಟದ ಮೂಲಕ ಈ ಸೇವೆಯನ್ನು ಜಾರಿಗೆ ತರಲಾಗಿದೆ. ಕಂಪನಿಯ ಪ್ರತಿನಿಧಿಗಳು ಮತ್ತು ವ್ಯಕ್ತಿಗಳಿಗೆ ಸುಲಭವಾಗಿ ನಿರ್ವಹಿಸಲು ಈ ಸೇವೆಯನ್ನು ಇಂಗ್ಲಿಷ್ ಮತ್ತು ಅರಬಿಕ್ ಭಾಷೆಗಳಲ್ಲಿ ಲಭ್ಯಗೊಳಿಸಲಾದೆ. ಹಲವು ವಿಧದ ವೀಸಾ ಮತ್ತು ಇಖಾಮಾ ನವೀಕರಣಕ್ಕೆ ಈ ವ್ಯವಸ್ಥೆಯ ಮೂಲಕ ಅರ್ಜಿ ಸಲ್ಲಿಸಬಹುದು. ಹೊಸ ವ್ಯವಸ್ಥೆಯು ವ್ಯಕ್ತಿಗಳಿಗೆ ತಮ್ಮ ವೀಸಾ ಅರ್ಜಿಗಳನ್ನು ನೇರವಾಗಿ ಸಲ್ಲಿಸಲು ಸಹಾಯ ಮಾಡುತ್ತದೆ.
ಅರ್ಜಿಗಳು ಮತ್ತು ದಾಖಲೆಗಳನ್ನು ಆನ್ಲೈನ್ನಲ್ಲಿ ಸಲ್ಲಿಸಬೇಕು. ಅವುಗಳನ್ನು ಪರಿಶೀಲಿಸಿದ ನಂತರ ಲಭಿಸುವ ರಶೀದಿಯನ್ನು ಸಂಬಂಧಪಟ್ಟ ವಸತಿ ಕಚೇರಿಗೆ ನಿಗದಿತ ಅವಧಿಯೊಳಗೆ ಸಲ್ಲಿಸುವ ಮೂಲಕ ಸೇವೆಗಳನ್ನು ಪೂರ್ಣಗೊಳಿಸಬಹುದು. ಹೊಸ ಸೇವೆಯು ರೆಸಿಡೆನ್ಸಿ ಸೇವೆಗಳನ್ನು ಸಂಪೂರ್ಣವಾಗಿ ಆನ್ಲೈನ್ ಮಾಡುವ ಮೊದಲ ಹಂತವಾಗಿದ್ದು, www.moi.gov.kw ನ ಮುಖಪುಟದಲ್ಲಿರುವ ಇ-ಫಾರ್ಮ್ಸ್ ಐಕಾನ್ ಕ್ಲಿಕ್ ಮಾಡಿದಲ್ಲಿ ಹೊಸ ಸೇವೆ ಲಭ್ಯವಾಗಲಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ