ಬೆಂಗಳೂರು : ಸಿಎಎ, ಎನ್ಆರ್ಸಿ ಪ್ರಕ್ರಿಯೆಯಿಂದ ತೊಂದರೆ ಇಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ತಾತನ(ಅಜ್ಜ) ಬಳಿ ಪೌರತ್ವ ದಾಖಲೆ ಇದೆಯೇ ಎಂದು ಮಾಜಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಸವಾಲೆಸೆದರು.
ಶುಕ್ರವಾರ ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಿಎಎ, ಎನ್ಆರ್ಸಿ ವಿರೋಧಿಸಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರಕಾರದ ಕಾಯ್ದೆಗಳ ವಿರುದ್ಧ ಯಾರು ಹೆದರುವ ಅಗತ್ಯ ಇಲ್ಲ ಎಂದರು.
ಚುನಾವಣೆ ವೇಳೆ ಪ್ರಧಾನಿ ಮೋದಿ ಅವರು ಮಾತು ಮಾತಿಗೂ ನಾನು ಚೌಕಿದಾರ್(ಕಾವಲುಗಾರ) ಎನ್ನುತ್ತಿದ್ದರು. ಆದರೆ, ಈಗ ಮನೆಯ ಮಾಲಕರಿಗೆ ನಿಮ್ಮ ದಾಖಲೆ ತೋರಿಸಿ ಎಂದು ಹೇಳುತ್ತಿದ್ದಾರೆ. ಹಳೇ ದಾಖಲೆ ಯಾರು ಇಟ್ಟುಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ಮೊದಲು ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ, ಅವರ ಕುಟುಂಬ ಸದಸ್ಯರ ದಾಖಲೆಗಳನ್ನು ಜನರ ಮುಂದೆ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ನರೇಂದ್ರ ಮೋದಿ ಪಾಕಿಸ್ತಾನದ ಪ್ರಧಾನಿ ಅಲ್ಲ, ಭಾರತದ ಪ್ರಧಾನಿ. ಈ ಬಗ್ಗೆ ಅವರಿಗೆ ಗಮನ ಇರಬೇಕು. ಪದೇ ಪದೇ ಪಾಕಿಸ್ತಾನದಲ್ಲಿ ದೌರ್ಜನ್ಯ ನಡೆಯುತ್ತಿದೆ ಎನ್ನುತ್ತಾರೆ. ಆದರೆ, ಉತ್ತರಪ್ರದೇಶ ಮತ್ತು ಕರ್ನಾಟಕದಲ್ಲಿಯೇ ಗೋಲಿಬಾರ್ ನಡೆಸಲಾಗಿದೆ. ಇದು ದೌರ್ಜನ್ಯವಲ್ಲವೇ ಎಂದು ಅವರು ಪ್ರಶ್ನಿಸಿದರು.
ಸಿಎಎ, ಎನ್ಆರ್ಸಿ ವಿರುದ್ಧ ದೇಶದಲ್ಲೆಡೆ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ಇದರ ಬಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಟ್ಟಿದೆ. ಅವರು, ಈ ವಿವಾದಿತ ಕಾಯ್ದೆಗಳನ್ನು ಹಿಂಪಡೆಯುತ್ತಾರೆ ಎನ್ನುವ ಭರವಸೆ ನಮಗಿದೆ. ಒಂದು ವೇಳೆ, ಈ ಕಾಯ್ದೆ ಜಾರಿಯಾದರೆ, ಇದನ್ನು ತಿರಸ್ಕರಿಸುವ ಆಂದೋಲನ ರೂಪಿಸಲಾಗುವುದು ಎಂದು ಝಮೀರ್ ಅಹ್ಮದ್ ಹೇಳಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ