ನವದೆಹಲಿ: ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಕ್ಯಾಂಪಸ್ ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ಭುಗಿಲೆದ್ದಿದೆ.
ದೆಹಲಿ, ಕೋಲ್ಕತಾ, ಮುಂಬೈ, ಬೆಂಗಳೂರು, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಹಿಂಸಾಚಾರವನ್ನು ಪೂರ್ವ ನಿಯೋಜಿತ ಕೃತ್ಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Karnataka: Protest held at Town Hall in Bengaluru against yesterday's violence in Jawaharlal Nehru University (JNU). pic.twitter.com/hQvo086yAo
— ANI (@ANI) January 6, 2020
ಮುಂಬೈನ ಖ್ಯಾತ ಪ್ರವಾಸಿ ತಾಣ ಗೇಟ್ ವೇ ಆಫ್ ಇಂಡಿಯಾ ಬಳಿ ಖ್ಯಾತ ನಟ ಸುಶಾಂತ್ ಸಿಂಗ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಂತೆಯೇ ಬೆಂಗಳೂರಿನ ಟೌನ್ ಹಾಲ್ ನಲ್ಲಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಿಂಸಾಚಾರ ನಡೆಸಿದ ಎಬಿವಿಪಿ ಗೂಂಡಾಗಳನ್ನು ಬಂಧಿಸಿ, ಜೆಎನ್ ಯು ವಿಸಿಯನ್ನು ಪದವಿಯಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
Hyderabad: Progressive Democratic Students Union(PDSU) activists protest in Osmania University against yesterday's #JNUViolence pic.twitter.com/un69Gtl3vU
— ANI (@ANI) January 6, 2020
ಇತ್ತ ಮುತ್ತಿನ ನಗರಿ ಹೈದರಾಬಾದ್ ನಲ್ಲೂ ಪ್ರತಿಭಟನೆಯ ಕಾವು ಜೋರಾಗಿದ್ದು, ಇಲ್ಲಿನ ಒಸ್ಮಾನಿಯಾ ವಿವಿ ಆವರಣದಲ್ಲಿ ಪಿಡಿಎಸ್ ಯು ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು