ಬೆಂಗಳೂರು: ಪುಣೆ ಬಿಲ್ಲವ ಸಂಘದ ಅಧ್ಯಕ್ಷ ಎನ್ನಲಾದ ವಿಶ್ವನಾಥ್ ಪೂಜಾರಿ ಕಡ್ತಲ ಎಂಬವರು ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ತನಗೆ ಹಾಗೂ ವಿನಯ್ಕುಮಾರ್ ಸೊರಕೆ ಅವರಿಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಹಿರಿಯ ಪತ್ರಕರ್ತ ದಿನೇಶ ಅಮೀನ್ ಮಟ್ಟು ಅವರು ಡಿ.ಜೆ.ಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.
‘ಉಡುಪಿಯಲ್ಲಿ ಇದೇ 11ರಂದು ನಡೆದಿದ್ದ ಬಿಲ್ಲವ– ಮುಸ್ಲಿಂ ಸ್ನೇಹ ಸಮಾವೇಶದ ಅಧ್ಯಕ್ಷತೆಯನ್ನು ವಿನಯ್ಕುಮಾರ್ ಸೊರಕೆ ವಹಿಸಿದ್ದರು. ನಾನು ಮುಖ್ಯ ಭಾಷಣಕಾರನಾಗಿದ್ದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೋಡಿ ಜನವರಿ 4ರಂದು ಕರೆ ಮಾಡಿದ್ದ ವಿಶ್ವನಾಥ್ ಪೂಜಾರಿ ಕಡ್ತಲ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕಾರ್ಯಕ್ರಮವನ್ನು ನಿಲ್ಲಿಸದಿದ್ದರೆ, ನನ್ನ ಹಾಗೂ ವಿನಯ್ ಕುಮಾರ್ ಸೊರಕೆಯ ಎದೆಗೆ ಗುಂಡಿಟ್ಟು ಕೊಲೆ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದರು’ ಎಂದು ದೂರಿನಲ್ಲಿ ದಿನೇಶ್ ಹೇಳಿದ್ದಾರೆ.
‘ಮುಸ್ಲಿಂ ಸಮುದಾಯವನ್ನು ಅಶ್ಲೀಲವಾಗಿ ನಿಂದಿಸಿರುವ ವಿಶ್ವನಾಥ್, ಹಲವು ಸುಳ್ಳು ಆರೋಪ ಮಾಡಿದ್ದಾರೆ. ಈ ಮೂಲಕ ಎರಡು ಧರ್ಮಗಳ ನಡುವೆ ಸಂಘರ್ಷ ಉಂಟಾಗಲು ಪ್ರಚೋದನೆ ನೀಡಿದ್ದಾರೆ. ಸಾಮಾಜಿಕ ಶಾಂತಿಯನ್ನು ಕೆಡಿಸಲು ಯತ್ನಿಸಿದ್ದಾರೆ. ಇಬ್ಬರ ಸಂಭಾಷಣೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲೂ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ದೂರಿನಲ್ಲಿ ದಿನೇಶ್ ಒತ್ತಾಯಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ