ದಾವಣಗೆರೆ: ಪಂಚಮಸಾಲಿ ಸಮಾಜದ ಮೂವರಿಗೆ ಸಚಿವ ಸ್ಥಾನ ನೀಡಿ ಎಂದು ಬೇಡಿಕೆ ಇಟ್ಟ ವಚನಾನಂದ ಸ್ವಾಮೀಜಿ ಅವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಹರಿಹರದಲ್ಲಿ ನಡೆದ ಹರ ಜಾತ್ರೆ ವೇಳೆ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಭಾಷಣಕ್ಕೆ ಸಿಎಂ ವಿರೋಧ ವ್ಯಕ್ತಪಡಿಸಿದ್ದು, ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ನೀಡಲೇಬೇಕು, ನೀಡದೆ ಹೋದರೆ ಸಮಾಜದಿಂದ ವಿರೋಧ ವ್ಯಕ್ತವಾಗುತ್ತೆ ಎಂದು ಸ್ವಾಮೀಜಿ ಆಗ್ರಹಿಸಿದರು.
ಸ್ವಾಮೀಜಿ ನಡೆಯಿಂದ ಸಿಡಿಮಿಡಿಗೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ‘ನಾಳೆಯೇ ರಾಜೀನಾಮೆ ಕೊಟ್ಟು ಹೋಗಲು ಸಿದ್ಧ’ ಎಂದು ಗುಡುಗಿದರು.ನೀವು ನನಗೆ ಬೆದರಿಸಬೇಡಿ ಎಂದು ಸ್ವಾಮೀಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ರೀತಿ ಮಾತನಾಡುವುದಾದರೆ ನಾನು ಹೊರಡುತ್ತೇನೆ’ ಎಂದು ಎದ್ದುನಿಂತರು. ಈ ರೀತಿ ಮಾತನಾಡದಂತೆ ಸ್ವಾಮೀಜಿಗೆ ಸೂಚಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುರುಗೇಶ ನಿರಾಣಿ ಅವರಿಗೆ ತಾಕೀತು ಮಾಡಿದರು.
ಅಷ್ಟೇ ಅಲ್ಲದೇ, ನನ್ನ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. 17 ಜನ ರಾಜೀನಾಮೆ ನೀಡದೇ ಇದ್ದರೆ ನಾನು ಸಿಎಂ ಆಗ್ತಾ ಇರಲಿಲ್ಲ,ನನ್ನ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ಸ್ವಾಮೀಜಿಗಳು ಏನು ಬೇಕಾದರೂ ಸಲಹೆ ನೀಡಿ, ನಾನು ಬಂದು ಚರ್ಚೆ ಮಾಡುತ್ತೇನೆ. ಸಲಹೆಗೆ ತಲೆ ಬಾಗುತ್ತೇನೆ ಎಂದರು.
ಆಗ ಮುಖ್ಯಮಂತ್ರಿ ಅವರನ್ನು ಸಮಾಧಾನಪಡಿಸಿ ಕೂರಿಸಿದ ಸ್ವಾಮೀಜಿ, ‘ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ನಿಮ್ಮ ಪರಿಸ್ಥಿತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೂ ಗೊತ್ತಾಗಲಿ ಎಂದೇ ಹೀಗೆ ಹೇಳುತ್ತಿದ್ದೇವೆ’ ಎಂದು ಸಮರ್ಥಿಸಿಕೊಂಡರು.
ಬಳಿಕ ಭಾವುಕರಾಗಿ ಮಾತನಾಡಿದ ಯಡಿಯೂರಪ್ಪ, ‘ಸ್ವಾಮೀಜಿ ಏನು ಬೇಕಾದರೂ ಸಲಹೆ ನೀಡಲಿ. ವೈಯಕ್ತಿಕವಾಗಿ ಕುಳಿತು ಚರ್ಚಿಸುತ್ತೇನೆ. ಬೇಡ ಅಂದರೆ ನಾಳೆಯೇ ರಾಜೀನಾಮೆ ಕೊಟ್ಟು ಮನೆಗೆ ಹೋಗಲು ಸಿದ್ಧನಿದ್ದೇನೆ’ ಎಂದು ಗುಡುಗಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ