ವಿಧಾನ ಸಭಾ ಚುನಾವಣೆ – ಮೈತ್ರಿ ಮಾಡಿಕೊಂಡ ಜೆಡಿಎಸ್-ಬಿಎಸ್ಪಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಫರ್ಧಿಸಲು ಜಾತ್ಯತೀತ ಜನತಾ ದಳ(ಜೆಡಿಎಸ್) ಮತ್ತು ಬಹುಜನ ಸಮಾಜ ಪಕ್ಷ(ಬಿಎಸ್‍ಪಿ) ಇಂದು ಅಧಿಕೃತ ಮೈತ್ರಿಯನ್ನು ಘೋಷಿಸಿವೆ. ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರಬಲ ಪೈಪೋಟಿ ನೀಡಲು ಮೈತ್ರಿಕೂಟ ವೇದಿಕೆ ಸಜ್ಜಾಗಿದೆ. ರಾಜಧಾನಿ ದೆಹಲಿಯಲ್ಲಿ ಇಂದು ಜೆಡಿಎಸ್ ನಾಯಕ ಡ್ಯಾನಿಷ್ ಅಲಿ ಮತ್ತು ಬಿಎಸ್‍ಪಿ ಮುಖಂಡ ಸತೀಶ್ ಚಂದ್ರ ಮಿಶ್ರಾ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಿಗೆ ಸ್ಪರ್ಧಿಸಲು ಉಭಯ ಪಕ್ಷಗಳ ನಡುವೆ ಮೈತ್ರಿ ಏರ್ಪಟ್ಟಿದೆ. ಇದು 2019ರ ಲೋಕಸಭೆ ಚುನಾವಣೆಗಳಲ್ಲೂ ಮುಂದುವರಿಯಲಿದೆ ಎಂದು ಅಲಿ ಮತ್ತು ಮಿಶ್ರಾ ಘೋಷಿಸಿದರು. ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಜೆಡಿಎಸ್ ಮತ್ತು ಬಿಎಸ್‍ಪಿ ಮೈತ್ರಿಯು ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರಬಲ ಪೈಪೋಟಿ ನೀಡಲಿದೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!