ರಿಯಾದ್: ಇರಾಕ್ನ ಭದ್ರತೆ ಮತ್ತು ಸ್ಥಿರತೆಗಾಗಿ ಅದರ ಜೊತೆಗೆ ನಿಲ್ಲುವುದಾಗಿ ಸೌದಿ ಕ್ಯಾಬಿನೆಟ್ ಹೇಳಿದೆ. ರಾಜ ಸಲ್ಮಾನ್ ಅಧ್ಯಕ್ಷತೆಯಲ್ಲಿ ಯಮಾಮ ಅರಮನೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ತೀರ್ಮಾನವನ್ನು ಪುನರಾವರ್ತಿಸಲಾಯಿತು.
ಸೌದಿ ಅರೇಬಿಯಾ ತನ್ನ ಸಹೋದರ ದೇಶವಾದ ಇರಾಕ್ನೊಂದಿಗೆ ಉಳಿಯಲಿದೆ. ಆ ದೇಶದ ಭದ್ರತೆ ಮತ್ತು ಸ್ಥಿರತೆ ಮತ್ತು ಅರಬ್ ಪ್ರಪಂಚದೊಂದಿಗಿನ ಅದರ ಸಂಬಂಧಕ್ಕೆ ಚ್ಯುತಿ ತರುವುದನ್ನು ಸಹಿಸಲಾಗದು. ಇಂತಹ ಎಲ್ಲ ಬಿಕ್ಕಟ್ಟುಗಳನ್ನು ನಿವಾರಿಸಲು ಸೌದಿ ಅರೇಬಿಯಾ ಇರಾಕ್ ಜೊತೆ ಕೈಜೋಡಿಸಲಿದೆ ಎಂದು ಕ್ಯಾಬಿನೆಟ್ ಸಭೆಯಲ್ಲಿ ರಾಜ ಸಲ್ಮಾನ್ ಹೇಳಿದರು.
ಐಎಸ್ ವಿರುದ್ಧ ಹೋರಾಡಲು ಅಂತರ್ರಾಷ್ಟ್ರೀಯ ಮಿತ್ರ ಪಡೆಗಳಿರುವ ಎರಡು ಇರಾಕಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಟ್ಟುಕೊಂಡು ಇರಾನ್ ನಡೆಸಿದ ದಾಳಿಯನ್ನು ಕ್ಯಾಬಿನೆಟ್ ಖಂಡಿಸಿದೆ. ಅಂತರ್ರಾಷ್ಟ್ರೀಯ ಕಾನೂನು ಮತ್ತು ಒಪ್ಪಂದಗಳನ್ನು ಅನುಸರಿಸುವಂತೆ ಮಾಡಲು ಮತ್ತು ಭದ್ರತೆಯನ್ನು ದುರ್ಬಲಗೊಳಿಸುವ ಇರಾನ್ನ ಪ್ರಯತ್ನಗಳನ್ನು ಕೊನೆಗೊಳಿಸುವಂತೆ ಮಾಡಲು ಅಂತರ್ರಾಷ್ಟ್ರೀಯ ಸಮುದಾಯ ಮುಂದಾಗ ಬೇಕೆಂದು ಒತ್ತಾಯಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ