ಅಜ್ಮಾನ್: ಪೇಪರ್‌ಗಳನ್ನು ಯುಎಇ ಕರೆನ್ಸಿಗಳಾಗಿ ಪರಿವರ್ತಿಸುವುದಾಗಿ ನಂಬಿಸಿ ಹಣ ಲಪಟಾಯಿಸಿದ ಆರೋಪದ ಮೇಲೆ ಇಬ್ಬರು ವಿದೇಶಿಯರನ್ನು ಅಜ್ಮಾನ್ ಪೊಲೀಸರು ಬಂಧಿಸಿದ್ದಾರೆ. ಇವರ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡ ವ್ಯಕ್ತಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಅರೋಪಿಗಳನ್ನು ಬಂದಿಸಲಾಗಿದೆ ಎಂದು ಅಜ್ಮಾನ್ ಪೊಲೀಸ್ ಕ್ರಿಮಿನಲ್ ಇನ್ವೆಸ್ಟಿಗೇಷನ್ ವಿಭಾಗದ ಮುಖ್ಯಸ್ಥ ಅಹ್ಮದ್ ಸಯೀದ್ ಅಲ್ ನುಐಮಿ ತಿಳಿಸಿದ್ದಾರೆ.
ಪ್ರತಿವಾದಿಗಳು ಕಪ್ಪು ಕಾಗದದ ತುಂಡನ್ನು ತೋರಿಸಿದರು. ನಂತರ ಅದಕ್ಕೆ ಶಾಯಿಯಂತಹ ದ್ರಾವಕವನ್ನು ಸಿಂಪಡಿಸಲಾಯಿತು. ಆ ಮೂಲಕ ಕಪ್ಪು ಕಾಗದವನ್ನು 100 ದಿರ್ಹಂ ನೋಟ್ ಆಗಿ ಮಾರ್ಪಾಟುಗೊಳಿಸಿ ತೋರಿಸಿದರು.15 ಸಾವಿರ ದಿರ್ಹಂ ಪಾವತಿಸಿದರೆ ಅದೇ ರೀತಿಯ ಕಪ್ಪು ಕಾಗದ ಮತ್ತು ಶಾಯಿಯನ್ನು ನೀಡುವುದಾಗಿ ಭರವಸೆ ನೀಡಿದರು.
ಹಣ ಪಾವತಿಸಿದ ನಂತರ, ಕಪ್ಪು ಕಾಗದದಿಂದ ತುಂಬಿದ ಚೀಲವನ್ನು ನೀಡಲಾಯಿತು. ಚೀಲವನ್ನು ತಕ್ಷಣ ತೆರೆಯದಂತೆ ತಿಳಿಸಿದ ಅವರು, ಕಾಗದವು ನೋಟ್‌ಗಳಾಗಿ ಮಾರ್ಪಾಡಾಗಲು ಸಮಯಾವಕಾಶ ತೆಗೆದುಕೊಳ್ಳುತ್ತದೆ ಎಂದು ನಂಬಿಸಿದರು. ಆದರೆ, ನಂತರ ವಂಚನೆಗೊಳಗಾಗಿರುವುದಾಗಿ ತಿಳಿದಾಗ, ಪೊಲೀಸರನ್ನು ಸಂಪರ್ಕಿಸಿದ್ದರು.
ದೂರನ್ನು ಸ್ವೀಕರಿಸಿದ ನಂತರ, ಅಜ್ಮಾನ್ ಪೊಲೀಸರು ಸಿಐಡಿ ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಿ ವಿವರವಾದ ತನಿಖೆಯನ್ನು ಪ್ರಾರಂಭಿಸಿದರು. ಬಳಿಕ ಸಮಾನವಾದ ರೀತಿಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿರುವ ಇಬ್ಬರನ್ನೂ ಸಾರ್ವಜನಿಕ ಪ್ರಾಸಿಕ್ಯೂಷನ್‌ಗೆ ಒಪ್ಪಿಸಲಾಯಿತು. ಇಂತಹ ವಂಚನೆಯಲ್ಲಿ ಯಾರಾದರೂ ಭಾಗಿಯಾಗಿರುವುದಾಗಿ ತಿಳಿದುಬಂದಲ್ಲಿ ಪೊಲೀಸರಿಗೆ ತಕ್ಷಣ ಕರೆ ಮಾಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ