ಲಖನೌ (ಜ.18): ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಿದ್ದ ತಾಯಿಯನ್ನೇ ಕಾಮುಕರು ಕೊಲೆ ಮಾಡಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದೆ.
ಮಹ್ಫೂಜ್ ಎಂಬಾತ 2018ರಲ್ಲಿ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಪ್ರಕರಣದ ಸಂಬಂಧ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಈ ದೂರಿಗೆ ಬಲವಾದ ಸಾಕ್ಷಿಗಳು ಇದ್ದಿದ್ದರಿಂದ ಪೊಲೀಸರು ಈತನನ್ನು ಬಂಧಿಸಿ ಜೈಲಿಗೆ ಅಟ್ಟಿದ್ದರು. ಎರಡು ವಾರಗಳ ಹಿಂದೆ ಮಹ್ಫೂಜ್ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದ.
ಹೊರ ಬಂದ ದಿನವೇ ಜೈಲಿಗೆ ಕಳುಹಿಸಿದ್ದ ಮಹಿಳೆ ಮೇಲೆ ಮಹ್ಫೂಜ್ ಹಲ್ಲೆ ನಡೆಸಿದ್ದ. ಇದನ್ನು ತಡೆಯಲು ಬಂದ ಆಕೆಯ ಸಹೋದರಿಗೂ ಮಹ್ಫೂಜ್ ಕಿರುಕುಳ ನೀಡಿದ್ದ. ಆಕೆಯನ್ನು ಥಳಿಸಿದ್ದ. ನಂತರ ಇವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದರು.
ಶುಕ್ರವಾರ ಹಲ್ಲೆಗೊಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಆಕೆಯ ಸಹೋದರಿ ಸ್ಥಿತಿ ಕೂಡ ಗಂಭೀರವಾಗಿದೆ. ಮಹ್ಫೂಜ್ ತಲೆಮರಿಸಿಕೊಂಡಿದ್ದು, ಈತನಿಗಾಗಿ ಹುಡುಕಾಟ ಆರಂಭವಾಗಿದೆ. ಸದ್ಯ ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲದೆ, ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ