ಲಂಡನ್, ಜ.23- ಐರೋಪ್ಯ ಸಮುದಾಯದಿಂದ (ಯೂರೋಪಿಯನ್ ಯೂನಿಯನ್) ಹೊರಬರಬೇಕೆಂಬ ಬಹುದಿನಗಳ ಬ್ರಿಟನ್ ಅಪೇಕ್ಷೆ ಈಡೇರಿದೆ. ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಮಂಡಿಸಿದ್ದ ಬ್ರೆಕ್ಸಿಟ್ (ಬ್ರಿಟನ್ ಎಕ್ಸಿಟ್) ಮಸೂದೆಗೆ ಇದ್ದ ಕಟ್ಟಕಡೆಯ ಅಡಚಣೆ ನಿವಾರಣೆಯಾಗಿದ್ದು ಬ್ರಿಟನ್ ಸಂಸತ್ತಿನಲ್ಲಿ ಅಂಗೀಕಾರವಾಗಿದೆ. ಈ ಮೂಲಕ ಈ ತಿಂಗಳಾಂತ್ಯದಲ್ಲಿ ಬ್ರಿಟನ್ ಯುರೋಪಿಯನ್ ಒಕ್ಕೂಟವನ್ನು ತೊರೆಯುವುದು ಖಚಿತವಾಗಿದೆ.
ಪ್ರಧಾನಮಂತ್ರಿ ಮಂಡಿಸಿದ್ದ ಯುರೋಪಿಯನ್ ಒಕ್ಕೂಟದಿಂದ ಬ್ರಿಟನ್ ಬೇರ್ಪಡುವ ಒಪ್ಪಂದಕ್ಕೆ ಹೌಸ್ ಆಫ್ ಲಾಡ್ರ್ಸ್ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಇದು ಕಾನೂನಾಗಿ ಪರಿವರ್ತನೆ ಹೊಂದಲು ಇದ್ದ ಅಡಚಣೆ ನಿವಾರಣೆಗೊಂಡಿದೆ.
ಜಾನ್ಸನ್ ಅವರ ಒಪ್ಪಂದವನ್ನು ಇಯು ಸಂಸತ್ತು ಇನ್ನೂ ಅಂಗೀಕರಿಸಬೇಕಾಗಿದೆ. ಅನಿರೀಕ್ಷಿತ ಸಂದರ್ಭಗಳನ್ನು ಹೊರತುಪಡಿಸಿ, ಇದು ಶಾಸನವಾಗುವುದು ಬಹುತೇಕ ಖಚಿತವಾಗಿದೆ. ಹಾಗೆಯೇ ಮತ್ತು ಜ.31ರಂದು ಬ್ರಿಟನ್ ಯುರೋಪಿಯನ್ ಒಕ್ಕೂಟದಿಂದ ಹೊರಬೀಳಲಿದೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ