janadhvani

Kannada Online News Paper

ಪಿಎಫ್‌ಐ, ಎಸ್‌ಡಿಪಿಐ ನಿಷೇಧಿಸುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ- ಮುಖ್ಯಮಂತ್ರಿ

ಶಿವಮೊಗ್ಗ: ಪ್ಯಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು. ಶ್ರೀರಾಮುಲು, ರಮೇಶ್ ಜಾರಕಿಹೊಳಿ ಅವರನ್ನು ಉಪ ಮುಖ್ಯಮಂತ್ರಿ ಮಾಡುವ ಕುರಿತು ಚರ್ಚೆಯಾಗಿಲ್ಲ. ದೆಹಲಿಗೆ ತೆರಳಿ ಗುರುವಾರ ವರಿಷ್ಠರನ್ನು ಭೇಟಿ ಮಾಡುವೆ. ಶುಕ್ರವಾರ ವಾಸಪ್‌ ಬರುವೆ. ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ SDPI ನಿಷೇಧಿಸಲು ನಿರ್ಧಾರ- ಬೊಮ್ಮಾಯಿ

ಫೆ.5ರಂದು ಬಜೆಟ್ ಮಂಡಿಸಲಾಗುವುದು. ಕೃಷಿ ಮತ್ತು ನೀರಾವರಿಗೆ ಆದ್ಯತೆ ನೀಡಲಾಗುತ್ತಿದೆ. ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸುವುದಿಲ್ಲ ಎಂದು ಮಾಹಿತಿ ನೀಡಿದರು.

error: Content is protected !! Not allowed copy content from janadhvani.com