ರಿಯಾದ್: ಖಾಸಗಿ ವಲಯದಲ್ಲಿ ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸುವ ಉದ್ದೇಶದಿಂದ ಸೌದಿ ಅರೇಬಿಯಾದ ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯವು ಇಪ್ಪತ್ತು ಹೊಸ ಯೋಜನೆಗಳನ್ನು ಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಸೌದಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು, ಖಾಸಗೀಕರಣಕ್ಕೆ ಅನುಕೂಲವಾಗುವುದು, ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸುವುದು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಪರಸ್ಪರ ಸ್ಪರ್ಧೆಯನ್ನು ಹೆಚ್ಚಿಸುವುದು ಈ ಯೋಜನೆಯ ಗುರಿಯಾಗಿದೆ.
ಈ ಯೋಜನೆಗಳು ಖಾಸಗಿ ವಲಯ ಮತ್ತು ಅಭ್ಯರ್ಥಿಗಳನ್ನು ಒಳಗೊಂಡ ಕಾರ್ಯಾಗಾರಗಳ ಸರಣಿಯ ಫಲಿತಾಂಶವಾಗಿದ್ದು, ಸಂಬಂಧಿತ ಸರ್ಕಾರಿ ಇಲಾಖೆಗಳು, ತಜ್ಞರು ಮತ್ತು ವಿಶೇಷ ಸಮಿತಿಗಳೊಂದಿಗಿನ ಸಭೆಗಳು ನಡಸಲಾಗಿದೆ. ವಿಷನ್ 2030 ಯೋಜನೆಯ ಉದ್ದೇಶಗಳಿಗೆ ಅನುಗುಣವಾಗಿ ರಾಷ್ಟ್ರೀಯ ಆರ್ಥಿಕ ಅಭಿವೃದ್ಧಿಯಲ್ಲಿ ಸ್ಥಳೀಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಈಗಾಗಲೇ ಘೋಷಿಸಿರುವ ಯೋಜನೆಗಳ ಮುಂದುವರಿಕೆಯಾಗಿದೆ ಹೊಸ ಯೋಜನೆಗಳು.
ಸೌದಿ ಖಾಸಗೀಕರಣ ಸೂಚ್ಯಂಕಗಳನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಖಾಸಗೀಕರಣವನ್ನು ಹೆಚ್ಚಿಸಲು ಖಾಸಗಿ ಸಂಸ್ಥೆಗಳನ್ನು ಉತ್ತೇಜಿಸುವ ಉತ್ಪನ್ನಗಳನ್ನು ಒದಗಿಸುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಖಾಸಗೀಕರಣವನ್ನು ಬೆಂಬಲಿಸುವ ಉದ್ದೇಶವನ್ನು ಈ ಯೋಜನೆಗಳು ಹೊಂದಿವೆ. ಹೊಸ ಯೋಜನೆಗಳಲ್ಲಿ ನೇಮಕಾತಿ ನೀತಿಗಳು ಮತ್ತು ವ್ಯವಸ್ಥೆಗಳನ್ನು ನವೀಕರಿಸುವುದು, ಉದ್ಯೋಗಾಕಾಂಕ್ಷಿಗಳು ಮತ್ತು ಸೌದಿ ಉದ್ಯೋಗಿಗಳಿಗೆ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು ಮತ್ತು ವೃತ್ತಿ ಮಾರ್ಗದರ್ಶನ ನೀಡುವ ಮೂಲಕ ಉದ್ಯೋಗಿಗಳಿಗೆ ಮಾರ್ಗದರ್ಶನ ಮತ್ತು ಬೆಂಬಲವನ್ನು ಒದಗಿಸುವುದು ಸೇರಿದೆ.
ಇತ್ತೀಚೆಗೆ, ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯವು ಖಾಸಗಿ ಆರೋಗ್ಯ ಸಂಸ್ಥೆಗಳ ನಡುವೆ ತಾತ್ಕಾಲಿಕ ಕಾರ್ಮಿಕ ವರ್ಗಾವಣೆಯನ್ನು ಸರಿಹೊಂದಿಸುವ ಸೇವೆಯನ್ನು ಪ್ರಾರಂಭಿಸಿದ್ದು, ಹೊಸ ‘ಅಜೀರ್’ ಯೋಜನೆಯಿಂದ ಅನುಮೋದಿಸಲಾಗಿದೆ.
ಸೌದಿ ಕಾರ್ಮಿಕ ಕಾನೂನಿನ ಬಗ್ಗೆ ಜಾಗೃತಿ ಮೂಡಿಸಲು ಮಾನವ ಸಂಪನ್ಮೂಲ ಅಭಿವೃದ್ಧಿ ನಿಧಿಯ ಸಹಭಾಗಿತ್ವದಲ್ಲಿ ತರಬೇತಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ