janadhvani

Kannada Online News Paper

ನವದೆಹಲಿ, ಫೆ 4: ಪೌರತ್ವ ನೋಂದಣಿಯನ್ನು (ಎನ್ ಆರ್ ಸಿ)ಇಡೀ ದೇಶಕ್ಕೆ ವಿಸ್ತರಿಸುವ ಉದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿರುವುದಕ್ಕೆ ತಿರುಗೇಟು ನೀಡಿರುವ ಎಐಎಂಐಎಂ ನಾಯಕ ಅಸದುದ್ದೀನ್ ಉವೈಸಿ, ಎನ್ ಆರ್ ಸಿ ಜಾರಿಗೆ ತರುವುದೇ ಇಲ್ಲ ಎಂದು ಸರ್ಕಾರ ಹೇಳುತ್ತಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಉವೈಸಿ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪ್ರಕ್ರಿಯೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಂದು ಜಾರಿಯಾದರೆ ಅದರ ಬೆನ್ನಲ್ಲೇ ಮತ್ತೊಂದು ಜಾರಿಯಾಗುತ್ತದೆ. ಈ ಕುರಿತು ಪ್ರಧಾನಿ ವಿವರಣೆ ನೀಡಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ, ಇಲ್ಲಿಯವರೆಗೆ ಎನ್ ಆರ್ ಸಿಯನ್ನು ರಾಷ್ಟ್ರ ಮಟ್ಟದಲ್ಲಿ ಜಾರಿಗೊಳಿಸಲು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿಕೆ ನೀಡಿದ್ದರು.

error: Content is protected !!
%d bloggers like this: