ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಪ್ರಗತಿಯಲ್ಲಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕುಟುಂಬದೊಂದಿಗೆ ಸಿವಿಲ್ ಲೈನ್ಸ್‌ನ ಮತಗಟ್ಟೆಯೊಂದರಲ್ಲಿ ಹಕ್ಕು ಚಲಾಯಿಸಿದರು.ತಮ್ಮ ಪತ್ನಿ ಸುನೀತಾ ಮತ್ತು ಪ್ರಥಮ ಬಾರಿ ಮತ ಚಲಾಯಿಸಲು ಅರ್ಹತೆ ಪಡೆದಿರುವ ಪುತ್ರ ಪುಳಕಿತ್ ಅವರೊಂದಿಗೆ ಹಕ್ಕು ಚಲಾಯಿಸಿದ ನಂತರ ಕೇಜ್ರಿವಾಲ್ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ಸರ್ಕಾರದ ಪ್ರಗತಿ ಪರ ಕಾರ್ಯಗಳನ್ನು ಪರಿಗಣಿಸಿ ಜನರು ಮತ ಚಲಾಯಿಸುತ್ತಾರೆ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ದೆಹಲಿಯಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಗಣ್ಯಾತಿಗಣ್ಯರ ಮತದಾನ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರು ನಿರ್ಮಲ ಭವನದಲ್ಲಿ ಇಂದು ಮತ ಚಲಾಯಿಸಿದರು. ಕಳೆದ ವಾರವಷ್ಟೇ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ತೆರಳಿ ವಿಶ್ರಾಂತಿಯಲ್ಲಿದ್ದ ಸೋನಿಯಾ ಇಂದು ಬೆಳಗ್ಗೆ ತಮ್ಮ ಪುತ್ರಿ ಪ್ರಿಯಾಂಕಾಗಾಂಧಿ ವಾದ್ರಾ ಅವರ ನೆರವಿನೊಂದಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.
ಔರಂಗಜೇಬ್ ನಗರದ ಎನ್.ಪಿ. ಸೆಕೆಂಡರಿ ಸ್ಕೂಲ್ ಮತಗಟ್ಟೆಯಲ್ಲಿ ರಾಹುಲ್‍ಗಾಂಧಿ ಮತ ಚಲಾವಣೆ ಮಾಡಿದರು. ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಬಿಜೆಪಿ ನಾಯಕ ರಾಮ್‍ಲಾಲ್ ಸೇರಿದಂತೆ ಅನೇಕ ಗಣ್ಯಾತಿ ಗಣ್ಯರು ಮತ ಚಲಾಯಿಸಿದ್ದಾರೆ. ದೆಹಲಿಯ ಸಿ.ಆರ್.ಪಾರ್ಕ್ ಪ್ರದೇಶದ ಮತಗಟ್ಟೆಯೊಂದರಲ್ಲಿ 111 ವರ್ಷದ ಕಾಳಿತಾರ ಮಂಡಲ್ ಎಂಬ ಶತಾಯುಷಿ ಮಹಿಳೆ ತಮ್ಮ ಮಗ, ಮೊಮ್ಮಕ್ಕಳು ಮತ್ತು ಕುಟುಂಬದ ಸದಸ್ಯರೊಂದಿಗೆ ಧಾವಿಸಿ ಮತ ಚಲಾಯಿಸಿದರು. ಮತದಾನ ಪವಿತ್ರ ಹಕ್ಕು. ಇದನ್ನು ಎಲ್ಲರೂ ಚಲಾಯಿಸಬೇಕು ಇದೇ ಸಂದರ್ಭದಲ್ಲಿ ಶತಾಯುಷಿ ಹೇಳಿದರು.
ಮಹಿಳೆಯರು ತಪ್ಪದೆ ಮತ ಚಲಾಯಿಸಿ:
ದೆಹಲಿ ವಿಧಾನಸಭಾ ಚುನಾವಣೆ ಪ್ರಗತಿಯಲ್ಲಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತ ಚಲಾಯಿಸುವಂತೆ ಆಮ್ ಆದ್ಮಿ ರಾಷ್ಟ್ರೀಯ ಸಂಚಾಲಕ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿಮಾಡಿದ್ದಾರೆ. “ನಿಮ್ಮ ಮನೆಯ ಜವಾಬ್ದಾರಿಯನ್ನು ನೀವು ಹೊತ್ತುಕೊಂಡಂತೆಯೇ, ದೇಶ ಮತ್ತು ದೆಹಲಿಯ ಜವಾಬ್ದಾರಿಯನ್ನು ವಹಿಸಿಕೊಳ್ಳಿ. ಎಲ್ಲಾ ಮಹಿಳೆಯರು ಮತ ಚಲಾಯಿಸಲು ಹೋಗಬೇಕು ಮತ್ತು ಅವರ ಮನೆಯ ಪುರುಷರನ್ನು ಸಹ ಕರೆದೊಯ್ಯಬೇಕು” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
15,000 ಜನರನ್ನು ಕೊಲ್ಲುವ ಗುರಿ: ಮುಹರಂ ಕಾರ್ಯಕ್ರಮದಲ್ಲಿ ವಿಷಪೂರಿತ ಮಾತ್ರೆಗಳನ್ನು ವಿತರಿಸಿದ ವ್ಯಕ್ತಿ ಬಂಧನ
‘ತೂಫಾನ್’ ಗೆ ಮರ್ಕಝ್ ಸಾಥ್ : ಕಾಂತಪುರಂ ಉಸ್ತಾದ್- ಗೃಹ ಸಚಿವ ರಮೇಶ್ ಚೆನ್ನಿತ್ತಲ ಸಮಾಲೋಚನೆ
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ