ನವದೆಹಲಿ: ಪ್ರತಿಭಟನೆ ಹೆಸರಿನಲ್ಲಿ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆ ಉಂಟುಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಶಾಹೀನ್ ಬಾಗ್‌ನಲ್ಲಿ ಪ್ರತಿಭಟನೆಯಲ್ಲಿ ತೊಡಗಿರುವವರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ, ದೆಹಲಿ ಸರ್ಕಾರ ಮತ್ತು ಪೊಲೀಸರಿಗೆ ನೊಟೀಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ಇದೇ 17ರಂದು ನಿಗದಿಪಡಿಸಲಾಗಿದೆ.
ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ವಿರೋಧಿಸಿ ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಮಂದಿ ಶಾಹೀನ್ ಬಾಗ್‌ನಲ್ಲಿ ಸುಮಾರು 50 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.ಪ್ರತಿಭಟನಾಕಾರರ ತೆರವಿಗೆ ಆದೇಶಿಸಬೇಕು ಎಂದು ವಕೀಲ ಅಮಿತ್ ಸಾಹ್‌ನಿ, ಬಿಜೆಪಿ ನಾಯಕ ನಂದ ಕಿಶೋರ್ ಗರ್ಗ್ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಚುನಾವಣೆ ಮುಗಿದ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಈ ಹಿಂದೆ ತಿಳಿಸಿತ್ತು.
‘ಒಂದೂವರೆ ತಿಂಗಳಿಗೂ ಹೆಚ್ಚು ಸಮಯದಿಂದ ದೆಹಲಿಯ ಶಾಹೀನ್ ಬಾಗ್, ಕಾಳಿಂದಿ ಕುಂಜ್ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ದೆಹಲಿ ಹಾಗೂ ನೋಯ್ಡಾಗಳ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವುದರಿಂದ ಜನರ ದಿನನಿತ್ಯದ ಕೆಲಸಗಳಿಗೆ ತೊಂದರೆ ಉಂಟಾಗುತ್ತಿದ್ದು, ಇದನ್ನು ತಪ್ಪಿಸಲು ಸಮಗ್ರ ಮಾರ್ಗಸೂಚಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು’ ಎಂದು ಗರ್ಗ್ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ