janadhvani

Kannada Online News Paper

ಶಾಹೀನ್ ಬಾಗ್ ನಲ್ಲಿ ಶಿಶು ಮೃತ್ಯು: ಕೇಂದ್ರ, ದೆಹಲಿ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಶಾಹೀನ್ ಬಾಗ್ ಪ್ರತಿಭಟನೆ ವೇಳೆ ನವಜಾತ ಶಿಶು ಮೃತಪಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿರುವ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಉತ್ತರ ನೀಡುವಂತೆ ಸೂಚಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕಳೆದ 50 ದಿನಗಳಿಂದ ದೆಹಲಿಯ ಶಾಹೀನ್ ಬಾಗ್ ನಲ್ಲಿ ನಡೆಸಲಾಗುತ್ತಿರುವ ಪ್ರತಿಭಟನೆಯಲ್ಲಿ ನವಜಾತ ಶಿಶುವೊಂದು ಮೃತಪಟ್ಟಿದ್ದು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ.

ಪ್ರತಿಭಟನೆಯಲ್ಲಿ ಶಿಶುಗಳ ಪಾಲ್ಗೊಳ್ಳುವಿಕೆಗೆ ಅನುಮತಿ ನೀಡಿದ್ದು ಯಾರು ಎಂದು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ, ಪ್ರಕರಣವನ್ನು ನ್ಯಾಯಾಲಯ ಸ್ವಯಂ ಪ್ರೇರಿತವಾಗಿ ತೆಗೆದುಕೊಳ್ಳಲಿದೆ ಎಂದು ಹೇಳಿದರು. ಇದೇ ವೇಳೆ ಪ್ರಕರಣದ ತುರ್ತು ವಿಚಾರಣೆಗೆ ಕೋರಿದ್ದ ವಕೀಲರ ಮನವಿ ತಿರಸ್ಕರಿಸಿದ ಬೊಬ್ಡೆ ಅವರು ಕಳೆದ ಐವತ್ತು ದಿನಗಶಳಿಂದ ಪ್ರತಿಭಟನೆ ನಡೆಯುತ್ತಿದೆ. 50 ದಿನಗಳ ಕಾಲ ಕಾದಿದ್ದೀರಿ ಎಂದರೆ ಇನ್ನೂ ಒಂದು ವಾರ ಕಾಯಬಹುದು ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರುವರಿ 17ಕ್ಕೆ ಮುಂದೂಡಿದೆ.

error: Content is protected !! Not allowed copy content from janadhvani.com