ಕಾರ್ಕಳ,ಫೆ.15: ಮೈಸೂರಿನಿಂದ ಬರುತ್ತಿದ್ದ ಬಸ್ಸೊಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉಡುಪಿಯ ಕಾರ್ಕಳದ ಮುಳ್ನೂರ್ ಘಾಟ್ ನಲ್ಲಿ ನಡೆದಿದೆ.
ಅಪಘಾತಕ್ಕೀಡಾದ ಬಸ್ ಪ್ರವಾಸಿ ಬಸ್ ಎಂದು ಹೇಳಲಾಗಿದೆ. ಮುಳ್ನೂರ್ ಘಾಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಬಸ್ ಬಂಡೆಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಬಸ್ ನಲ್ಲಿದ್ದ 7 ಪ್ರವಾಸಿಗಳು ಸ್ಥಳದಲ್ಲೇ ಮೃತಪಟ್ಟಿದ್ದು,ನಾಲ್ವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರಿನಿಂದ ಖಾಸಗಿ ಸಂಸ್ಥೆಯೊಂದು ಪ್ರವಾಸ ಹಮ್ಮಿಕೊಂಡಿತ್ತು ಎನ್ನಲಾಗಿದೆ. ಪ್ರವಾಸದ ಸಂಭ್ರಮದಲ್ಲಿದ್ದವರು ಮುಳ್ನೂರು ಘಾಟ್ ನಲ್ಲಿ ಭೀಕರ ಅಪಘಾತಕ್ಕೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಅಧಿಕ ಪ್ರವಾಸಿಗಳು ಗಾಯಗೊಂಡಿದ್ದಾರೆ. ಮೃತರ ಹೆಸರು ಇನ್ನೂ ತಿಳಿದು ಬಂದಿಲ್ಲ.