ರಿಯಾದ್: ಸೌದಿ ಅರೇಬಿಯಾದ ರಾಜಧಾನಿಯ ಚಹರೆಯನ್ನೇ ಬದಲಾಯಿಸುವ ರಿಯಾದ್ ಮೆಟ್ರೋ ರೈಲುಗಳ ಓಡಾಟವು ಜೂನ್ನಲ್ಲಿ ಪ್ರಾರಂಭಗೊಳ್ಳಲಿದ್ದು, ಡಿಸೆಂಬರ್ ವೇಳೆಗೆ ಈ ಸೇವೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ರಿಯಾದ್ ಮೆಟ್ರೋದ ಶೇಕಡಾ ಎಂಭತ್ತೈದು ಕಾಮಗಾರಿ ಪೂರ್ಣಗೊಂಡಿದೆ. ಆರು ಪಥದ ಮೆಟ್ರೋ ಡಿಸೆಂಬರ್ ವೇಳೆಗೆ ಪೂರ್ಣ ಸೇವೆ ಪ್ರಾರಂಭವಾಗಲಿದ್ದು, ಆ ಹಿನ್ನೆಲೆಯಲ್ಲಿ ರಿಯಾದ್ ಮೆಟ್ರೋ ನಿರ್ಮಾಣ ಮುಂದುವರಿದಿದೆ.
ಇದು ವಿಶ್ವದ ಅತಿ ಉದ್ದದ ಮೆಟ್ರೋ ಮಾರ್ಗಗಳಲ್ಲಿ ಒಂದಾಗಿದ್ದು, 176 ಕಿ.ಮೀ. ವ್ಯಾಪ್ತಿ ಹೊಂದಿದೆ. ಸೇವೆಯ ಮೊದಲ ಹಂತವು ಜೂನ್ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದ್ದು, ಪೂರ್ಣ ಸೇವೆ ಡಿಸೆಂಬರ್ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಪ್ರಾರಂಭವಾಗಲಿದೆ. ಮೆಟ್ರೋ 80 ನಿಲ್ದಾಣಗಳನ್ನು ಹೊಂದಿದೆ. ರೈಲಿನಲ್ಲಿ ಎರಡು ಅಥವಾ ನಾಲ್ಕು ಬೋಗಿಗಳು ಇರಲಿವೆ. ಒಟ್ಟು 586 ಬೋಗಿಗಳನ್ನು ಈಗಾಗಲೇ ತಲುಪಿಸಲಾಗಿದೆ.
ವೇಗವಾಗಿ ಸಂಚರಿಸಬಹುದಾದ ಈ ಮೆಟ್ರೋ ಹಾದಿಯು 36 ಕಿ.ಮೀ ಉದ್ದದ ಸುರಂಗವನ್ನು ಹೊಂದಿದೆ. ಇದೆಲ್ಲವೂ ಪೂರ್ಣಗೊಂಡಿದೆ. ನಿಲ್ದಾಣಗಳ ಕಾಮಗಾರಿ ಮತ್ತು ವಿದ್ಯುದೀಕರಣ ಪ್ರಗತಿಯಲ್ಲಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ