ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋದರೆ ತಪ್ಪೇನು? ರಾಹುಲ್ ಬೆಂಬಲಕ್ಕೆ ನಿಂತ ಕುಮಾರಸ್ವಾಮಿ

ಬೆಂಗಳೂರು, ಫೆ.13:-ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನು? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಸ್ವಚ್ಛ ಮನಸ್ಸು ಮುಖ್ಯವೇ ಹೊರತು ಏನು ತಿನ್ನುತ್ತಾರೆ ಅನ್ನುವುದು ಅಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಜನಾಶೀರ್ವಾದ ಯಾತ್ರೆ ವೇಳೆ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಬಿಎಸ್‍ವೈ ಟ್ವೀಟ್ ಕುರಿತು ಸುದ್ದಿಗಾರರು ಕೇಳಿದ ಪ್ರತಿಕ್ರಿಯೆಗೆ ಉತ್ತರಿಸಿದ ಅವರು, ಕೆಲವು ದೇವರಿಗೆ ಮಾಂಸಾಹಾರವೇ ಪ್ರಿಯ. ಮನಸ್ಸು ಶುದ್ಧವಿಲ್ಲದೆ ದೇವಸ್ಥಾನಕ್ಕೆ ಹೋಗಿ ಏನು ಪ್ರಯೋಜನ? ಎಂದರು. ಈ ಬಗ್ಗೆ ನಾನು ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ನಮ್ಮ ದೇಹವೇ ಒಂದು ಮಾಂಸದ ಮುದ್ದೆ. ಹಾಗಾಗಿ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋದರೆ ತಪ್ಪೇನು ಎಂದರು.

ಇದೇ ವೇಳೆ ನಾವು ಅಧಿಕಾರಕ್ಕೆ ಬಂದರೆ ಒಬ್ಬ ದಲಿತ ಹಾಗೂ ಒಬ್ಬ ಮುಸ್ಲಿಂ ನಾಯಕರನ್ನ ಉಪ ಮುಖ್ಯಮಂತ್ರಿ ಮಾಡುವುದಾಗಿ ತಿಳಿಸಿದರು. ಇದಲ್ಲದೆ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ ಸಾಲಮನ್ನಾ ಮಾಡುತ್ತೇವೆ. ಮತ್ತೆ ಸಾಲ ಮಾಡದ ಹಾಗೇ ರೈತರಿಗೆ ಸಹಾಯ ಮಾಡುತ್ತೇವೆ ಎಂದರು.

Leave a Reply

Your email address will not be published. Required fields are marked *

error: Content is protected !!