janadhvani

Kannada Online News Paper

ಭಾರತದ ಶ್ರೀಮಂತ ಸಂಸ್ಕೃತಿಗೆ ‘ತಾಜ್ ಮಹಲ್’ ಸಾರ್ವಕಾಲಿಕ ಸಾಕ್ಷಿ- ಟ್ರಂಪ್

ಆಗ್ರಾ: ಸಬರ್ ಮತಿ ಆಶ್ರಮ, ಮೊಟೆರಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರಿವಾರ ಆಗ್ರಾದಲ್ಲಿರುವ ತಾಜ್ ಮಹಲ್ ಗೆ ಭೇಟಿ ನೀಡಿ ಸೂರ್ಯಾಸ್ತವನ್ನು ಕಣ್ತುಂಬಿಕೊಂಡಿತು. ಆಗ್ರಾಗೆ ಆಗಮಿಸಿದ ಟ್ರಂಪ್ ದಂಪತಿಯನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಅವರು ಸ್ವಾಗತಿಸಿದರು.

ಬಳಿಕ ಪ್ರೇಮ ಸೌಧದ ಎದುರು ವಿಹರಿಸಿ, ಫೋಟೋಗೆ ಪೋಸ್ ನೀಡಿದ ಟ್ರಂಪ್ ದಂಪತಿ ತಾಜ್ ಮಹಲ್ ಸೌಂದರ್ಯಕ್ಕೆ ಬೆರಗಾಗಿ ಭಾರತದ ಸಂಸ್ಕೃತಿಯನ್ನು ಮನಸಾರೆ ಹೊಗಳಿದ್ದಾರೆ. ತಾಜ್ ಮಹಲ್ ಭಾರತದ ಶ್ರೀಮಂತ ಸಂಸ್ಕೃತಿಗೆ ಸಾರ್ವಕಾಲಿಕ ಸಾಕ್ಷಿ ಎಂದು ಟ್ರಂಪ್ ಸಂದರ್ಶಕರ ಪುಸ್ತಕದಲ್ಲಿ ಬರೆದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

error: Content is protected !! Not allowed copy content from janadhvani.com