ದೆಹಲಿ, ಫೆ.28: ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಬೆಳವಣಿಗೆಯು ಕಳೆದ ಅಕ್ಟೋಬರ್-ಡಿಸೆಂಬರ್ 2019 ರ ಕೊನೆಯ ತ್ರೈಮಾಸಿಕದಲ್ಲಿ ಕನಿಷ್ಠ ಶೇ.4.7ಕ್ಕೆ ಇಳಿದಿದೆ. ಇದು ಕಳೆದ 7 ವರ್ಷದಲ್ಲಿ ಉತ್ಪಾದನಾ ವಲಯದ ಉತ್ಪಾದನೆಯಲ್ಲಿನ ಅತ್ಯಂತ ಕಳಪೆ ದಾಖಲಾತಿ ಎಂದು ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿ ಅಂಶಗಳು ಸ್ಪಷ್ಟಪಡಿಸಿವೆ.
2012-13ರ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.4.3 ರಷ್ಟು ದಾಖಲಾಗಿತ್ತು. ಆ ನಂತರ ಈ ಪ್ರಮಾಣದಲ್ಲಿ ಜಿಡಿಪಿ ಕುಸಿದಿರುವುದು ಇದೇ ಮೊದಲು ಎನ್ನಲಾಗುತ್ತಿದೆ. 2019 ರ ಡಿಸೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯು ಸುಮಾರು ಏಳು ವರ್ಷಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ. ದೇಶದ ಆರ್ಥಿಕ ಬೆಳವಣಿಗೆಯ ಪ್ರಮಾಣ ಕುಸಿತ ಹಾದಿ ಹಿಡಿದಿದೆ ಎಂದು ಸ್ವತಃ ಹಣಕಾಸು ಸಚಿವಾಲಯ ಹೇಳಿದೆ.
ಜಿಡಿಪಿ ಬೆಳವಣಿಗೆಯು 2018-19ರ ಇದೇ ತ್ರೈಮಾಸಿಕದಲ್ಲಿ 5.6% ಎಂದು ದಾಖಲಾಗಿತ್ತು. ಪ್ರಸ್ತುತ ಹಣಕಾಸಿನ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) ಆರ್ಥಿಕ ಬೆಳವಣಿಗೆಯನ್ನು ಈ ಹಿಂದೆ ಅಂದಾಜು ಮಾಡಿದ 4.5% ರಿಂದ 5.1% ಕ್ಕೆ ಪರಿಷ್ಕರಿಸಲಾಗಿದೆ. ಅಂತೆಯೇ, ಮೊದಲ ತ್ರೈಮಾಸಿಕ ಬೆಳವಣಿಗೆಯನ್ನು ಶೇ.5 ರಿಂದ ಶೇ.5.6 ಗೆ ಪರಿಷ್ಕರಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ