ಮಂಗಳೂರು: ಇಲ್ಲಿನ ಜಪ್ಪಿನಮೊಗರು ನಲ್ಲಿ ದಕ್ಷಿಣ ಕನ್ನಡ ಪೌರ ಸಮನ್ವಯ ಸಮಿತಿಯಿಂದ ಮಾರ್ಚ್ 8-2020 ಆದಿತ್ಯವಾರದಂದು “NRC,CAA, NPR” ಮತ್ತು ದೆಹಲಿಯ ಜನಾಂಗೀಯ ಹತ್ಯಾಕಾಂಡದ ವಿರುದ್ಧ “ಮಂಗಳೂರು ಚಲೋ” ಕಾರ್ಯಕ್ರಮ ನಡೆಯಲಿದ್ದು, ಅದನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಕರೆ ನೀಡಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಇಂಡಿಯನ್ ಗ್ರಾಂಡ್ ಮುಫ್ತೀ ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದ್ ಹಾಗೂ ಸಯ್ಯಿದ್ ಜಿಫ್ರಿ ಮುತ್ತುಕೋಯ ತಂಙಳ್ ಹಾಗೂ ಇನ್ನಿತರ ನಾಯಕರು ಭಾಗವಹಿಸಲಿದ್ದು, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ನಾಯಕರು- ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಂಗಳೂರು ಚಲೋ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.