ದಾವಣಗೆರೆ, ಮಾ 8- ತಾವು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಶಾದಿ ಭಾಗ್ಯ ಯೋಜನೆಯನ್ನು ಬಿಜೆಪಿ ಸರ್ಕಾರ ರದ್ದುಪಡಿಸಿರುವ ಕ್ರಮಕ್ಕೆ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾದಿ ಭಾಗ್ಯ ಯೋಜನೆಯನ್ನು ರದ್ದು ಪಡಿಸುವ ಮೂಲಕ ಬಿಜೆಪಿ ಅಲ್ಪ ಸಂಖ್ಯಾತರ ವಿರೋಧಿಗಳೆಂದು ಸಾಬೀತು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಎಂದು ಪ್ರಧಾನಿ ಅವರು ಪ್ರತಿ ಭಾಷಣದಲ್ಲೂ ಹೇಳುತ್ತಾರೆ. ಆದರೆ ಅದನ್ನು ಆಚರಣೆಗೆ ತರುವುದಿಲ್ಲ. ಹೀಗಾಗಿ ಬಿಜೆಪಿಯವರು ಸಂವಿಧಾನ ವಿರೋಧಿಗಳು.
ಬೀದರ್ನ ಶಾಹೀನಾ ಶಾಲೆಯ ದೇಶ ದ್ರೋಹಿ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು 124 (0) ಪ್ರಕಾರ ದೇಶದ್ರೋಹವಾಗಿಲ್ಲ. ಈ ಅಂಶವನ್ನೇ ನ್ಯಾಯಾಲಯ ಎತ್ತಿ ಹಿಡಿದಿದೆ. ಸಿಎಎ ವಿರೋಧಿಸುವವರ ವಿರುದ್ಧ ಇಂತಹ ಪ್ರಕರಣಗಳನ್ನು ಹೂಡಬಾರದು ಎಂದು ಕೋರ್ಟ್ ಹೇಳಿದೆ. ಆದರೆ ಬಿಜೆಪಿ ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ ಎಂದು ದೂರಿದರು.
ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ
ಮೈಸೂರು: ಬಿಜೆಪಿ ಸರ್ಕಾರ ಶಾದಿ ಭಾಗ್ಯ ಒಂದೆ ಅಲ್ಲ. ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯ ಸ್ಥಗಿತ ಮಾಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಯೋಜನೆಗಳಲ್ಲಿ ಒಂದಾದ ಶಾದಿ ಭಾಗ್ಯ ಯೋಜನೆಗೆ ತಿಲಾಂಜಲಿ ವಿಚಾರವಾಗಿ ಇಂದು ಹೆಚ್ಡಿಕೆ ಮಾತನಾಡಿದ್ದಾರೆ.
ಇನ್ನು ಬೆಳಗಾವಿಯಲ್ಲಿ ಬಿಜೆಪಿ ಶಾಸಕರೆ ತಮ್ಮ ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ ಎಂದು ಗಲಾಟೆ ಮಾಡಿದ್ದಾರೆ. ಅಲ್ಲಿಯ ಮಂತ್ರಿಯನ್ನ ಕೂರಿಸಿಕೊಂಡು ತಮಗೆ ಅನುದಾನ ಕೊಡಿ ಎಂದಿದ್ದಾರೆ. ಸಿಎಂ ಬಿಎಸ್ವೈ ಅವರು ನೆರೆ ಹಾವಳಿಯ ಜನರಿಗೆ ಹಣ ಬಿಡುಗಡೆ ಮಾಡಿ ಎಂದು ಹೇಳಿದ್ದಾರೆ. ಆದರೂ ಸಹ ಅಧಿಕಾರಿಗಳು ಹಣ ಬಿಡುಗಡೆ ಮಾಡಿಲ್ಲ. ಇದನ್ನ ಬಿಜೆಪಿ ಶಾಸಕರೇ ಆರೋಪಿಸಿದ್ದಾರೆ. ಇದು ಸದ್ಯದ ಬಿಜೆಪಿ ಸರ್ಕಾರದ ಸ್ಥಿತಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ