ಬೆಂಗಳೂರು,ಮಾ.09:ವಿಶ್ವಾದ್ಯಂತ ನೂರಕ್ಕೂ ಹೆಚ್ಚು ದೇಶಗಳಲ್ಲಿ ಭಯ ಭೀತಿ ಹುಟ್ಟಿಸಿರುವ ಕೊರೊನಾ ಸೊಂಕು, ರಾಜ್ಯದಲ್ಲೂ ಭಯದ ವಾತಾವರಣ ನಿರ್ಮಾಣ ಮಾಡಿದೆ. ರಾಜ್ಯದಲ್ಲಿ ಮೊದಲ ಕೊರೊನಾ ಕೇಸ್ ದೃಢಪಟ್ಟಿದೆ. ರಾಜ್ಯದವರೇ ಆದ ಅಮೆರಿಕದಿಂದ ಬಂದಿರುವ ಸಾಫ್ಟ್‌ವೇರ್ ಎಂಜಿನಿಯರ್‌ನಲ್ಲಿ ಸೋಂಕು ಪತ್ತೆಯಾಗಿದೆ.
ಇವರು ಮಾ. 1ರಂದು ರಾತ್ರಿ ಬೆಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದಿದ್ದರು. ಜ್ವರ, ಕೆಮ್ಮು, ನೆಗಡಿಯಿಂದಾಗಿ ಮಾ. 5ರಂದು ರಾಜೀವ್ ಗಾಂಧಿ ಹೃದಯ ರೋಗ ಆಸ್ಪತ್ರೆಗೆ ದಾಖಲಾಗಿದ್ದ, ಅವರಿಗೆ ಸೋಂಕು ತಗುಲಿರೋದು ರಕ್ತದ ಮಾದರಿ ಪರೀಕ್ಷೆಯಿಂದ ದೃಢ ಪಟ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದಾರೆ.
ಈ ಸಂಬಂಧವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಭಾಗದ ನರ್ಸರಿಯಿಂದ 5 ನೇ ತರಗತಿವರೆಗೆ ನಾಳೆಯಿಂದಲೇ ರಜೆ ಘೋಷಿಸಲಾಗಿದೆ. ಪರೀಕ್ಷೆ ಸಮಯ ಇದಾಗಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ. ಮುಂದಿನ ಆದೇಶದವರೆಗೆ ರಜೆ ಮುಂದುವರಿಯಲಿದೆ.
ಶೈಕ್ಷಣಿಕ ಪ್ರವಾಸ ಕೈಗೊಳ್ಳುವವರು ಎಚ್ಚರ
ಶಾಲಾ, ಕಾಲೇಜುಗಳಲ್ಲಿ ಬೇಸಿಗೆ ರಜೆಯ ಮುಂಚಿತವಾಗಿ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದು, ದ.ಕ.ಜಿಲ್ಲೆಗಳಿಂದ ಸಾಮಾನ್ಯವಾಗಿ ಬೆಂಗಳೂರು, ಮೈಸೂರು ಮುಂತಾದ ಕಡೆಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯಲಾಗುತ್ತದೆ.
ಇದೀಗ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಶಿಕ್ಷಕರು ಹಾಗೂ ಪೋಷಕರು ದೂರದ ಪ್ರವಾಸವನ್ನು ಕೈಬಿಟ್ಟು, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ