ದುಬೈ: ಕೋವಿಡ್ -19 ಹರಡಿರುವ ಹಿನ್ನೆಲೆಯಲ್ಲಿ ಯುಎಇಯಲ್ಲಿ ವದಂತಿಗಳನ್ನು ಹರಡುವವರನ್ನು ಕಠಿಣ ಶಿಕ್ಷೆ ಕಾಯುತ್ತಿದೆ. ಹಾಗೇನಾದರೂ ಒಂದುವೇಳೆ ಊಹಾಪೊಹಗಳನ್ನು ಹರಡಿದರೆ 30 ಲಕ್ಷ ದಿರ್ಹಮ್ ದಂಡ ಮತ್ತು ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಆಂತರಿಕ ಸಚಿವಾಲಯ ಎಚ್ಚರಿಕೆ ನೀಡಿದೆ.
ಶಿಕ್ಷೆಯನ್ನು ಆನ್ಲೈನ್ ಕಾನೂನಿನ ಅನುಸಾರವಾಗಿ ವಿಧಿಸಲಾಗುತ್ತದೆ. ಸೋಶಿಯಲ್ ಮೀಡಿಯಾ ಮೂಲಕ ಇಂತಹ ನಕಲಿ ಸಂದೇಶಗಳು ಹರಡುವ ಬಗ್ಗೆ ತಿಳಿದು ಬಂದ ಕಾರಣಕ್ಕಾಗಿ ಅಧಿಕಾರಿಗಳು ಈ ಎಚ್ಚರಿಕೆ ನೀಡಿದ್ದಾರೆ. ದೇಶದಲ್ಲಿ ಕೋವಿಡ್ -19 ಸೋಂಕಿಗೆ ಒಳಗಾದವರ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಿ ವದಂತಿಗಳನ್ನು ಹರಡಬೇಡಿ. ಅದು ಸಮಾಜದಲ್ಲಿ ಭಯ ಮತ್ತು ಭೀತಿಯನ್ನು ದ್ವಿಗುಣಗೊಳಿಸುತ್ತದೆ.
ಅದೇ ವೇಳೆ, ರೋಗದ ವಿರುದ್ಧ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಕಳೆದ ದಿವಸ ಸರಕಾರಿ, ಆರೋಗ್ಯ, ವಿದ್ಯಾಭ್ಯಾಸ ಸ್ಥಾಪನೆಗಳಿಗೆ ಸಂಬಂಧಿಸಿದಂತೆ ಅನೇಕ ವದಂತಿಗಳನ್ನು ಹರಡಲಾಗಿತ್ತು. ಅಬುಧಾಬಿ ಝಾಯಿದ್ ವಿಶ್ವವಿದ್ಯಾನಿಲಯದಲ್ಲಿ ವೈರಸ್ ಹರಡಿರುವ ವದಂತಿಗಳು ಹರಡಿದ್ದು, ವಿದ್ಯಾರ್ಥಿಗಳಲ್ಲಿ ಭೀತಿ ಹುಟ್ಟಿಸಿದೆ.
ವೈರಸ್ ಸೋಂಕಿನ ಬಗ್ಗೆ ಆರೋಗ್ಯ ಅಧಿಕಾರಿಗಳು ಒದಗಿಸುವ ಮಾಹಿತಿಯನ್ನು ಮಾತ್ರ ಅನುಸರಿಸಬೇಕು. ಆರೋಗ್ಯ ಮತ್ತು ರಕ್ಷಣಾ ಸಚಿವಾಲಯ ಹೊರಡಿಸಿರುವ ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಇಲಾಖೆ ವಿನಂತಿಸಿದೆ.
ದೃಢೀಕರಿಸದ ಮಾಹಿತಿಯನ್ನು ಪ್ರಸಾರ ಮಾಡಬೇಡಿ. ಇದನ್ನು ಮಾಧ್ಯಮಗಳು ಸೇರಿದಂತೆ ಕಟ್ಟುನಿಟ್ಟಾಗಿ ಪಾಲಿಸಬೇಕು. ನಕಲಿ ಸುದ್ದಿ ಅಥವಾ ಹಾನಿಕಾರಕ ಮಾಹಿತಿಯನ್ನು ಹರಡಿದರೆ ಅವರು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ