janadhvani

Kannada Online News Paper

7, 8 ಮತ್ತು 9ನೇ ತರಗತಿ ಪರೀಕ್ಷೆ ಮುಂದೂಡಲಾಗಿದೆ- ಶಿಕ್ಷಣ ಇಲಾಖೆ

ಬೆಂಗಳೂರು ,ಮಾ.15: ರಾಜ್ಯಾದ್ಯಂತ ಕೊರೋನಾ ವೈರಸ್ ಭೀತಿ ಹೆಚ್ಚಾಗಿರುವುದರಿಂದ 7, 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದೆ.

ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ. ಸೋಮವಾರದಿಂದ ಆರಂಭವಾಗಬೇಕಾಗಿದ್ದ 7ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಹಾಗೇ 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಮಾರ್ಚ್​ 31ರವರೆಗೆ ಯಾವುದೇ ಪರೀಕ್ಷೆಗಳನ್ನು ನಡೆಸುವುದು ಬೇಡ ಎಂದು ಎಲ್ಲ ಶಾಲೆಗಳಿಗೆ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಮುಂದಿನ ಪರೀಕ್ಷೆಯ ಹೊಸ ದಿನಾಂಕವನ್ನು ಇನ್ನೂ ಘೋಷಣೆ ಮಾಡಿಲ್ಲ. ಕರ್ನಾಟಕದಲ್ಲಿ ಕೊರೋನಾ ವೈರಸ್​​ ಪ್ರಕರಣಗಳನ್ನು ನೋಡಿಕೊಂಡು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಮುಂದಿನ ಪರೀಕ್ಷಾ ದಿನಾಂಕವನ್ನು ನಿಗದಿ ಮಾಡುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಘೋಷಿಸಲಾಗುವುದು.

ಆದರೆ 10ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಿಗದಿಯಂತೆ ಮಾರ್ಚ್​ 27ರಿಂದ ಏಪ್ರಿಲ್ 9ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಆಯಾ ದಿನಗಳಂದು ಮಾತ್ರ ವಿದ್ಯಾರ್ಥಿಗಳು ಹಾಜರಾಗುವಂತೆ ಹೇಳಲಾಗಿದೆ. 

error: Content is protected !! Not allowed copy content from janadhvani.com