ದೋಹಾ: ಕೋವಿಡ್ ರೋಗವು ಅನಿಯಂತ್ರಿತವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗಲ್ಫ್ ರಾಷ್ಟ್ರಗಳ ನಾಯಕರು ಎಲ್ಲ ಭಿನ್ನತೆಗಳನ್ನು ಬದಿಗಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಖತರ್‌ನ ಮಾಜಿ ಪ್ರಧಾನ ಮಂತ್ರಿ ಶೈಖ್ ಹಮದ್ ಬಿನ್ ಜಾಸಿಮ್ ಬಿನ್ ಜಾಬರ್ ಅಲ್ತಾನಿ ಕರೆ ನೀಡಿದ್ದಾರೆ.
ಜಿಸಿಸಿ ನಾಯಕರು ಒಟ್ಟಾಗಿ ಕೆಲಸ ಮಾಡಬೇಕು, ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ರೋಗದಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಬೇಕು ಎಂದರು.
ಈ ವಿಷಯವನ್ನು ಅವರು ಟ್ವಿಟರ್‌ನಲ್ಲಿ ಪ್ರಕಟಿಸಿದ್ದು, ರೋಗವನ್ನು ಯಾವಾಗ ಮತ್ತು ಹೇಗೆ ನಿಯಂತ್ರಿಸಬೇಕೆಂದು ನಮಗೆ ಖಚಿತವಿಲ್ಲ. ಆದರೆ, ಕೋವಿಡ್ ಸೋಂಕು ರಾಜಕೀಯ, ಜಾಗತಿಕ ಆರೋಗ್ಯ ಮತ್ತು ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂಬುದು ಖಚಿತ ಎಂದರು.
ವಿಶ್ವದ ಇತಿಹಾಸಕಾರರು ಕೋವಿಡ್ -19 ರ ಮೊದಲು ಮತ್ತು ನಂತರ ಎಂಬುದಾಗಿ ಮುಂದೆ ಮೌಲ್ಯಮಾಪನ ಮಾಡಲಿದ್ದಾರೆ.
ಆದರೆ, ನನ್ನ ಬೇಡಿಕೆಯನ್ನು ಖತರ್ ವಿರುದ್ಧದ ನಿರ್ಬಂಧಗಳನ್ನು ತೆಗೆದುಹಾಕುವ ತಂತ್ರವೆಂದು ಪರಿಗಣಿಸಬೇಕಾಗಿಲ್ಲ. ಕೊಲ್ಲಿ ದೇಶಗಳ ಉತ್ತಮ ಭವಿಷ್ಯಕ್ಕಾಗಿ ನಾನು ಮಾತನಾಡುತ್ತಿದ್ದೇನೆ ಎಂದು ಶೈಖ್ ಹಮದ್ ಬಿನ್ ಜಾಸಿಮ್ ಬಿನ್ ಜಾಬರ್ ಅಲ್ತಾನಿ ಹೇಳಿದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ