ಬೆಂಗಳೂರು: ಮಾರಕ ಕರೋನಾ ವೈರಸ್ ಭೀತಿಯಿಂದಾಗಿ ರಾಜ್ಯದಲ್ಲಿ ಮಾರ್ಚ್ 27 ರಿಂದ ಆರಂಭವಾಗಬೇಕಿದ್ದ 2020 ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಇಂದು ನಡೆಯಬೇಕಿದ್ದ ಪಿಯುಸಿ ಪರೀಕ್ಷೆಯನ್ನು ರಾಜ್ಯ ಶಿಕ್ಷಣ ಇಲಾಖೆ ಮುಂದೂಡಿದೆ.
2020ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮಾರ್ಚ್ 27 ರಿಂದ ಏಪ್ರಿಲ್ 9 ರವರೆಗೆ ನಿಗದಿಗೊಳಿಸಲಾಗಿತ್ತು. ಇದಲ್ಲದೆ ಪಿಯುಸಿ ಪರೀಕ್ಷೆಗಳು ಈಗಾಗಲೇ ಮುಗಿದಿದ್ದು, ಮಾರ್ಚ್ 23(ಇಂದು) ಆಂಗ್ಲ ಭಾಷೆ ಪರೀಕ್ಷೆ ನಡೆಯಬೇಕಿತ್ತು. ಆದರೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಿರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಕಷ್ಟವಾಗಬಹುದು ಎಂಬುದನ್ನು ಮನಗಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
SSLC-PUC ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.ಇದಲ್ಲದೇ ಕೋವಿಡ್-19 ರ ಭೀತಿಯಿಂದಾಗಿ ಈಗಾಗಲೇ ಮುಂದೂಡಲ್ಪಟ್ಟಿರುವ 7 ರಿಂದ 9 ನೇ ತರಗತಿ ಪರೀಕ್ಷೆಗಳಿಗೂ ಸಹ ಮಾರ್ಚ್ 31 ರೊಳಗೆ ನೂತನ ವೇಳಾಪಟ್ಟಿ ಘೋಷಿಸುವ ಬಗ್ಗೆ ಇಲಾಖೆ ಮಾಹಿತಿ ನೀಡಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ