ಮಂಗಳೂರು, ಮಾ.24:-ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನ್ ಲಾಕ್ ನಲ್ಲಿನ ಅಸೌಕರ್ಯ ಕುರಿತು ಟೆಲಿಫೋನ್ ಸಂಭಾಷಣೆ ಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ಆತಂಕ ಗೊಂಡಿದ್ದರು.
ಈ ಸಂದರ್ಭದಲ್ಲಿ ಅಧಿವೇಶನದ ನಿಮಿತ್ತ ದೆಹಲಿಯಲ್ಲಿದ್ದ ಸಂಸದ ನಳಿನ್ ಕುಮಾರ್ ಕಟೀಲ್, ತಮ್ಮ ಲೋಕಸಭಾ ಕ್ಷೇತ್ರದಲ್ಲಿರುವ ಜನರು ವೆನ್ ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ಸರಿಯಾಗಿ ನೋಡಿಕೊಳ್ಳಲಾಗುತ್ತಿಲ್ಲ ಎನ್ನುವ ಊಹಾಪೋಹದ ಬಗ್ಗೆ ಗೊಂದಲ ಪಡುತ್ತಿರುವುದನ್ನು ಅರಿತುಕೊಂಡು ತಕ್ಷಣ ದೆಹಲಿಯಿಂದ ಬೆಂಗಳೂರಿಗೆ ಬಂದು ಅಲ್ಲಿಂದ ತಡಮಾಡದೇ ರಸ್ತೆ ಮಾರ್ಗವಾಗಿ ಮಂಗಳೂರಿಗೆ ಆಗಮಿಸಿದರು.

ಮಂಗಳೂರಿಗೆ ತಲುಪಿದ ಕೂಡಲೇ ನೇರವಾಗಿ ವೆನ್ ಲಾಕ್ ಆಸ್ಪತ್ರೆಗೆ ತೆರಳಿದ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು. ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಕರೋನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ.

ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು. ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರ ಈ ಕ್ಷಿಪ್ರ ಕಾರ್ಯ ಚಟುವಟಿಕೆಯಿಂದ ಜನರಲ್ಲಿ ಇದ್ದ ಗೊಂದಲ ನಿವಾರಣೆಯಾಗಿದೆ. ಜನರು ಊಹಾಪೋಹಗಳನ್ನು ನಂಬದಂತೆ, ಜಿಲ್ಲಾಡಳಿತ, ರಾಜ್ಯ, ರಾಷ್ಟ್ರ ಸಂಪೂರ್ಣವಾಗಿ ಜನರ ಆರೋಗ್ಯ ಕಾಳಜಿಗೆ ಕಟಿಬದ್ಧವಾಗಿದೆ ಎಂದು ನಳಿನ್ ಕುಮಾರ್ ಜನರಿಗೆ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್