ಮಂಗಳೂರು: ಇಲ್ಲಿನ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ ನೀಡಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಅಲ್ಲಿಯೂ ಉಚಿತವಾಗಿಯೇ ಚಿಕಿತ್ಸೆ ನೀಡಲಾಗುವುದು ಎಂದರು.
ವೆನ್ಲಾಕ್ ಆಸ್ಪತ್ರೆಯ 250 ಹಾಸಿಗೆಗಳ ಕಟ್ಟಡವನ್ನು ಸಂಪೂರ್ಣವಾಗಿ ಕೋವಿಡ್-19 ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲಾಗುವುದು. ಆಸ್ಪತ್ರೆಯ 20 ಹಾಸಿಗೆಯುಳ್ಳ ಆಯುಷ್ ಕಟ್ಟಡದಲ್ಲಿ ಶಂಕಿತ ರೋಗಿಗಳಿಗೆ ಮೀಸಲಿಡಲಾಗುವುದು. ಖಾಸಗಿ ಆಸ್ಪತ್ರೆ ಯಲ್ಲಿರುವ ಕೊರೊನಾ ಶಂಕಿತರನ್ನೂ ವೆನ್ಲಾಕ್ಗೆ ದಾಖಲು ಮಾಡಲಾಗುವುದು ಎಂದರು.
ಈಗಾಗಲೇ ವೆನ್ಲಾಕ್ನಲ್ಲಿ ದಾಖಲಾಗಿರುವ ಇತರ 218 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗುವುದು. ಬಡ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಇದರೊಂದಿಗೆ ಪ್ರತಿ ಮೆಡಿಕಲ್ ಕಾಲೇಜುನಲ್ಲಿ 20 ಹಾಸಿಗೆಗಳ ಐಸೋಲೇಷನ್ ವಾರ್ಡ್ ನಿರ್ಮಾಣ ಮಾಡಲು ವ್ಯವಸ್ಥೆ ಮಾಡಲಾಗಿ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಭಾಗಿಯಾಗಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್