ರಿಯಾದ್: ಕೋವಿಡ್ ಹರಡುವುದನ್ನು ತಡೆಯಲು ಸೌದಿ ಅರೇಬಿಯಾದಲ್ಲಿ ಘೋಷಿಸಲಾದ ಕರ್ಫ್ಯೂ ವಿರುದ್ಧ ಸಾಮಾಜಿಕ ಮಾಧ್ಯಮಗಳ ಮೂಲಕ ಪೋಸ್ಟ್ ಪ್ರಕಟಿಸಿದರೆ, ಕಠಿಣ ಶಿಕ್ಷೆಯನ್ನು ನೀಡಲಾಗುದು.
ಕರ್ಫ್ಯೂ ಉಲ್ಲಂಘಿಸುವ ಅಥವಾ ಇತರರನ್ನು ಉಲ್ಲಂಘಿಸುವಂತೆ ಪ್ರಚೋದಿಸುವ ಚಿತ್ರಗಳು, ವಿಡಿಯೋ ಮತ್ತು ಆಡಿಯೊ ತುಣುಕುಗಳನ್ನು ತಯಾರಿಸುವ, ಪೋಸ್ಟ್ ಮಾಡುವ ಮತ್ತು ಹಂಚಿಕೊಳ್ಳುವವರಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 30 ಲಕ್ಷ ರಿಯಾಲ್ ವರೆಗೆ (ಸುಮಾರು 6ಕೊಟಿ 7ಲಕ್ಷ ರೂ. ವರೆಗೆ) ದಂಡ ವಿಧಿಸಲಾಗುವುದು ಎಂದು ಸೌದಿ ಪಬ್ಲಿಕ್ ಪ್ರಾಸಿಕ್ಯೂಷನ್ ಎಚ್ಚರಿಸಿದೆ.
ಅಧಿಕೃತ ಟ್ವೀಟ್ನಲ್ಲಿ ಈ ಘೋಷಣೆ ಮಾಡಲಾಗಿದ್ದು, ಸಾರ್ವಜನಿಕ ಕಾನೂನುಗಳನ್ನು ಉಲ್ಲಂಘಿಸುವುದು, ಪ್ರೇರಣೆ ನೀಡುವುದು ಮತ್ತು ಪ್ರಚಾರ ಮಾಡುವುದು ದೊಡ್ಡ ಅಪರಾಧವಾಗಿದೆ. ಅಪರಾಧಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಅಪರಾಧ ತಡೆ ಕಾಯ್ದೆಯ 6 ನೇ ವಿಧಿ ಪ್ರಕಾರ, ಐದು ವರ್ಷಗಳ ಜೈಲು ಶಿಕ್ಷೆ ಮತ್ತು 30 ಲಕ್ಷ ರಿಯಾಲ್ ವರೆಗೆ ತಕ್ಷಣದ ಶಿಕ್ಷೆಯನ್ನು ವಿಧಿಸಲಾಗುತ್ತದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ