ಮನಾಮ: ಕೋವಿಡ್-19 ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡವರ ಪೈಕಿ ಬಹ್ರೈನ್ ಇತರ ಎಲ್ಲ ಕೊಲ್ಲಿ ರಾಷ್ಟ್ರಗಳಿಗಿಂತ ಮುಂದಿದೆ. ರೋಗ ಹರಡುವಿಕೆಯ ಸವಾಲುಗಳನ್ನು ಎದುರಿಸುವಲ್ಲಿ ದೇಶವು ಕೈಗೊಂಡ ಕ್ರಮಗಳು ಫಲಪ್ರದವಾಗಿರುವ ಸೂಚನೆಯಾಗಿದೆ ಇದು ಎನ್ನಲಾಗಿದೆ.
ಫೆಬ್ರವರಿ 24 ರಂದು ಮೊದಲ ಕೋವಿಡ್ ಪ್ರಕರಣ ದೃಢಪಟ್ಟ ಬಹ್ರೈನ್ ನಲ್ಲಿ ಈಗಾಗಲೇ 272 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 495 ಪ್ರಕರಣಗಳು ವರದಿಯಾಗಿದ್ದು, ಅರ್ಧಕ್ಕಿಂತ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ ಮತ್ತು ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ.
ಬಹ್ರೈನ್ನಲ್ಲಿ ಶೇಕಡಾ 50ಕ್ಕೂ ಹೆಚ್ಚು ಜನರು ಈ ಕಾಯಿಲೆಯಿಂದ ಗುಣಮುಖರಾಗಿದ್ದಾರೆ. ಸೌದಿ ಅರೇಬಿಯಾದಲ್ಲಿ 1104ರಲ್ಲಿ 35 (ಶೇಕಡಾ 3.17), ಯುಎಇ (405) 55, (13.58 ಶೇಕಡಾ), ಒಮಾನ್ (152), 23 (15.13 ಶೇಕಡಾ), ಕುವೈತ್ (235), 64 (27.23 ಶೇಕಡಾ), ಖತರ್ (562), 43 (7.65 ಶೇಕಡಾ), ಜಾಗತಿಕ ಚಿಕಿತ್ಸೆಯ ಶೇಕಡಾವಾರು ಪ್ರಕಾರ ರೋಗ ಮುಕ್ತರಾಗಿದ್ದಾರೆ.
ಕೋವಿಡ್ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ಕಾರ್ಯಪಡೆಯ ನೇತೃತ್ವದಲ್ಲಿ ಪ್ರತಿರೋಧ ಕ್ರಮಗಳು ಮುನ್ನೆಡೆಯಲ್ಲಿದೆ. ರೋಗ ನಿರ್ಣಯ ಪರೀಕ್ಷೆಗಳ ಮೇಲೆ ಬಹ್ರೈನ್ ಸಕ್ರಿಯವಾಗಿ ಗಮನ ಹರಿಸುತ್ತಿದೆ. ಈಗಾಗಲೇ, ದೇಶದಲ್ಲಿ 31,526 ಜನರನ್ನು ಪರೀಕ್ಷಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ