ದುಬೈ: ಕೊರೋನ ವೈರೆಸ್ ವ್ಯಾಪಕವಾಗುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಯುಎಇಯಲ್ಲಿ ಕ್ವಾರಂಟೈನ್ ಸಹಿತ ನಿರ್ದೇಶನಗಳನ್ನು ಪಾಲಿಸದಿದ್ದರೆ 50,000 ದಿರ್ಹಂ ವರೆಗೆ ದಂಡ ವಿಧಿಸಲಾಗುವುದು.
ಕ್ಯಾಬಿನೆಟ್ ಸಭೆಯ ನಂತರ ಯುಎಇ ಅಟಾರ್ನಿ ಜನರಲ್ ಈ ಆದೇಶ ಹೊರಡಿಸಿದ್ದಾರೆ. ಅನಗತ್ಯ ಕಾರಣಗಳಿಗಾಗಿ ಮನೆಯಿಂದ ಹೊರಡುವವರಿಗೆ 2,000 ದಿರ್ಹಮ್ ದಂಡ ವಿಧಿಸಲಾಗುತ್ತದೆ. ಅಗತ್ಯ ಸರಕುಗಳನ್ನು ಖರೀದಿಸುವವರಿಗೆ ಮತ್ತು ಕೆಲಸಕ್ಕೆ ಹೋಗುವವರಿಗೆ ರಿಯಾಯಿತಿ ಇದೆ.
ವೈದ್ಯಕೀಯ ಮುಖವಾಡಗಳನ್ನು ಧರಿಸದ ಅಥವಾ ಸುರಕ್ಷಿತ ದೂರವನ್ನು ಕಾಯ್ದುಕೊಳ್ಳದವರಿಗೆ 1,000 ದಿರ್ಹಂ ದಂಡ ವಿಧಿಸಲಾಗುತ್ತದೆ. ಮೂರಕ್ಕಿಂತ ಹೆಚ್ಚು ಜನರು ಕಾರುಗಳಲ್ಲಿ ಹತ್ತಿದರೂ, 1,000 ದಿರ್ಹಂ ತಂಡ ವಿಧಿಸಲಾಗುವುದು.
ಕೋವಿಡ್ -19 ಹರಡುವುದನ್ನು ತಡೆಗಟ್ಟಲು ಮತ್ತು ನಿವಾಸಿಗಳು ಮತ್ತು ಸಂದರ್ಶಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಯುಎಇ ಜಾರಿಗೆ ತಂದ ತಡೆಗಟ್ಟುವಿಕೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಈ ಕ್ರಮ ಎನ್ನಲಾಗಿದೆ. ಈ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸುವವರಿಗೆ 500ರಿಂದ 50,000 ದಿರ್ಹಂ ವರೆಗೆ ದಂಡ ವಿಧಿಸಲಾಗುತ್ತದೆ.
ಪುನರಾವರ್ತಿತ ಉಲ್ಲಂಘನೆಯು ದಂಡವನ್ನು ದ್ವಿಗುಣಗೊಳಿಸುತ್ತದೆ. ಮೂರನೇ ಬಾರಿಗೆ ಪುನರಾವರ್ತಿಸಿದರೆ, ಅಪರಾಧಿಗಳನ್ನು ಫೆಡರಲ್ ಪಬ್ಲಿಕ್ ಪ್ರಾಸಿಕ್ಯೂಷನ್ನ ತುರ್ತು ಮತ್ತು ಕ್ರಿಮಿನಲ್ ಪ್ರಾಸಿಕ್ಯೂಷನ್ ಇಲಾಖೆಗೆ ಹಸ್ತಾಂತರಿಸಲಾಗುವುದು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ